ಹನುಮಸಾಗರ: ಭಾರತ ಪ್ರಪಂಚದಲ್ಲೇ ದೊಡ್ಡ ಪ್ರಜಾಪ್ರಭುತ್ವ ಹೊಂದಿದ ದೇಶವಾಗಿದೆ. ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು ಎಂದು ಸಂಪನ್ಮೂಲ ವ್ಯಕ್ತಿ ಅಬೀಬ್ ಪಾಷಾ ಹೇಳಿದರು.
ತುಮರಿಕೊಪ್ಪದಲ್ಲಿ ಬುಧವಾರ ಗ್ರಾಪಂ ಹಾಗೂ ರಾಜ್ಯ ಚುನಾವಣೆ ಆಯೋಗ ಏರ್ಪಡಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಮತದಾನ ಮಾಡುವುದು 18 ವರ್ಷ ಮೇಲ್ಪಟ್ಟ ಎಲ್ಲರ ಕರ್ತವ್ಯವಾಗಿದೆ. ಆದರೆ, ಇತ್ತೀಚೆಗೆ ಮತದಾನಕ್ಕೆ ಜನರು ನಿರುತ್ಸಾಹ ತೋರುತ್ತಿದ್ದು, ಬೇಸರ ಸಂಗತಿಯಾಗಿದೆ. 18 ವರ್ಷ ಮೇಲ್ಪಟ್ಟ ಯುವಜನತೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬೇಕು. ವಿವಿ ಪ್ಯಾಡ್‌ನಲ್ಲಿ ಹೇಗೆ ಮತದಾನ ಮಾಡಬೇಕು ಎಂದು ತಿಳಿದುಕೊಳ್ಳಬೇಕು. ಮತದಾನ ಪ್ರಮಾಣ ಹೆಚ್ಚಿಸುವ ಪ್ರಯತ್ನ ಎಲ್ಲರಿಂದಾಗಲಿ ಎಂದರು.
ಸಂಪನ್ಮೂಲ ವ್ಯಕ್ತಿ ದೊಡ್ಡನಗೌಡ ಪಾಟೀಲ್, ಗ್ರಾಪಂ ಅಧ್ಯಕ್ಷ ಹನುಮಂತ ಮೂಗನೂರು, ಪಿಡಿಒ ಪಂಪಣ್ಣ ಗಂಗನಾಳ, ಗ್ರಾಪಂ ಸಿಬ್ಬಂದಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಇತರರಿದ್ದರು.