ಹೂವಿನಹಡಗಲಿಯಲ್ಲಿ ತಾಲೂಕು ಪ್ರೌಢಶಾಲಾ ಮುಖ್ಯಗುರುಗಳ ಸಂಘದಿಂದ ಮಂಗಳವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶಾಸಕ ಕೃಷ್ಣನಾಯ್ಕ ಉದ್ಘಾಟಿಸಿದರು. ಬಿಇಒ ಮಹೇಶ್ ಪೂಜಾರ್, ತಾಪಂ ಇಒ ಡಾ.ಜಯರಾಮ್ ಚವ್ಹಾಣ್, ಪ್ರೌಢಶಾಲೆ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಂ.ಶಿವಲಿಂಗಪ್ಪ ಇತರರಿದ್ದರು. 
ಜಿಲ್ಲೆ

ಪ್ರತಿ ಸರ್ಕಾರಿ ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್

ಪ್ರವೀಣ ಉದುಸಾ ದಲಬಂಜನ್

ಹೂವಿನಹಡಗಲಿ: ವಿದ್ಯಾರ್ಥಿ ಜೀವನದಲ್ಲಿ ಅಭ್ಯಾಸದ ಕಡೆಗೆ ಹೆಚ್ಚಿನ ಗಮನ ನೀಡುವ ಮೂಲಕ ಉತ್ತಮ ಅಂಕ ಗಳಿಸಬೇಕು. ವಿದ್ಯಾವಂತರಾದ ಎಲ್ಲರೂ ಉನ್ನತವಾದ ಹುದ್ದೆ ಪಡೆಯಲು ಪ್ರಯತ್ನಿಸಬೇಕು ಎಂದು ಶಾಸಕ ಕೃಷ್ಣಾನಾಯ್ಕ ಹೇಳಿದರು.
ಪಟ್ಟಣದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ತಾಲೂಕು ಪ್ರೌಢಶಾಲಾ ಮುಖ್ಯಗುರುಗಳ ಸಂಘದಿಂದ ಮಂಗಳವಾರ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಉತ್ತಮ ಅಂಕಗಳಿಸಿ

ಸಮಾಜದಲ್ಲಿ ಪ್ರತಿಯೊಂದು ಮಗು ಅಕ್ಷರವನ್ನು ಕಲಿಯಬೇಕು. ಶಿಕ್ಷಣದಿಂದ ಅಭಿವೃದ್ಧಿ ಸಾಧ್ಯ. ಪ್ರಸ್ತುತ ದಿನಗಳಲ್ಲಿ ಕಂಪ್ಯೂಟರ್ ಜ್ಞಾನ ಮುಖ್ಯವಾಗಿ ಬೇಕಿರುವುದರಿಂದ ತಾಲೂಕಿನ ಪ್ರತಿ ಸರ್ಕಾರಿ ಶಾಲೆಯಲ್ಲಿ ಕಂಪ್ಯೂಟರ್ ಪ್ರಯೋಗಾಲಯ ಆರಂಭಿಸಲಾಗುವುದು. ಇಂಗ್ಲಿಷ್ ವಿಷಯ ಸೇರಿದಂತೆ ವಿದ್ಯಾರ್ಥಿಗಳಿಗೆ ಕಠಿಣವೆನಿಸುವ ವಿಷಯಗಳನ್ನು ಶಾಲೆಯ ಶಿಕ್ಷಕರು ವಿಶೇಷ ತರಗತಿ ತೆಗೆದುಕೊಳ್ಳುವ ಮೂಲಕ ಫಲಿತಾಂಶ ಸುಧಾರಣೆಗೆ ಮುಂದಾಗಬೇಕು ಎಂದರು.

ಬಿಇಒ ಮಹೇಶ್ ಪೂಜಾರ್, ತಾಪಂ ಇಒ ಡಾ.ಜಯರಾಮ್ ಚವ್ಹಾಣ್ ಮಾತನಾಡಿದರು. ಅಕ್ಷರ ದಾಸೋಹ ಯೋಜನಾ ಸಹಾಯಕ ನಿರ್ದೇಶಕ ವಿ.ಹನುಮಂತಪ್ಪ, ದೈಹಿಕ ಶಿಕ್ಷಣ ಅಧೀಕ್ಷಕ ಮುಸ್ತಫಾ, ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ, ಸರ್ಕಾರಿ ನೌಕರರ ಸಂಘದ ಖಜಾಂಚಿ ಮಂಜುನಾಥ ಭೋವಿ, ಪ್ರೌಢಶಾಲೆ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಂ.ಶಿವಲಿಂಗಪ್ಪ, ಕಾರ್ಯದರ್ಶಿ ಸುರೇಶ ಅಂಗಡಿ ಇತರರಿದ್ದರು.