ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ರಾಷ್ಟಿçÃಯ ಸೇವಾ ಯೋಜನೆ ಮತ್ತು ವಿವಿಧ ಸಂಘಟನೆಗಳ ವತಿಯಿಂದ ಕುಶಾಲನಗರ ತಾಲೂಕು ಕೂಡ್ಲೂರು ಗ್ರಾಮದಲ್ಲಿ ಶನಿವಾರ ವಿಶ್ವ ಜಲ ದಿನ: 2025 ಆಚರಿಸಲಾಯಿತು. ಶಾಲಾ ಪ್ರಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಜಲ ದಿನದ ಮಹತ್ವ ಹಾಗೂ ನೀರಿನ ಸಂರಕ್ಷಣೆ ಕುರಿತು ಮಾಹಿತಿ ನೀಡಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಅತ್ಯಮೂಲ್ಯ ಸಂಪತ್ತಾದ ನೀರನ್ನು ಪೋಲು ಮಾಡದೇ ಮಿತವಾಗಿ ಬಳಕೆ ಮಾಡುವ ಮೂಲಕ ಮುಂದಿನ ಉತ್ತಮ ಭವಿಷ್ಯಕ್ಕಾಗಿ ಉಳಿಸಿ ಸಂರಕ್ಷಿಸಲು ಪಣ ತೊಡಬೇಕು.
ನೀರಿನ ಅಭಾವ ತಡೆಗಟ್ಟಲು ಇರುವ ಒಂದೇ ಮಾರ್ಗವೆಂದರೆ ನೀರಿನ ಸಂರಕ್ಷಣೆ ಲಭ್ಯವಿರುವ ನೀರನ್ನು ಜಾಗರೂಕತೆಯಿಂದ ಮತ್ತು ಮಿತವ್ಯಯದಿಂದ ಬಳಸಿ, ಮುಂದಿನ ಪೀಳಿಗೆಗೆ ನೀರನ್ನು ಉಳಿಸುವುದೇ ನೀರಿನ ಸಂರಕ್ಷಣೆಯಾಗಿದೆ. ಅಮೂಲ್ಯವಾಗಿರುವ ನೀರನ್ನು ಸಂರಕ್ಷಿಸುವ ದೃಷ್ಟಿಯಿಂದ ಜಲಮೂಲಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು
ನೀರಿನ ಸಂರಕ್ಷಣೆಯ ಮಹತ್ವ ಕುರಿತು ಮಾಹಿತಿ ನೀಡಿದ ಜಿಲ್ಲಾ ಜಲ ಜೀವನ್ ಮಿಷನ್ ಯೋಜನಾ ವ್ಯವಸ್ಥಾಪಕ ಕೆ.ಪುಟ್ಟಸ್ವಾಮಿ ಮಾತನಾಡಿ, ಪ್ರತಿಯೊಬ್ಬರೂ ನೀರನ್ನು ಮಿತವಾಗಿ ಬಳುಸುವುದರ ಮೂಲಕ ಜಲ ಸಂರಕ್ಷಣೆ ಮಾಡುವ ಅಗತ್ಯವಿದೆ. ಮಳೆನೀರು ಕೊಯ್ಲು ಮತ್ತು ಅಂತರ್ಜಲ ಸಂರಕ್ಷಣೆ ಬಗ್ಗೆ ನಾವು ಹೆಚ್ಚಿನ ಆದ್ಯತೆ ನೀಡುವ ಮೂಲಕ ನಾಳಿನ ಉತ್ತಮ ಭವಿಷ್ಯಕ್ಕಾಗಿ ನೀರಿನ ಸಂರಕ್ಷಣೆಗೆ ಪಣ ತೊಡಬೇಕಿದೆ ಎಂದರು.
ಜಲ ಜೀವನ್ ಮಿಷನ್ ಘಟಕದ ಜಿಲ್ಲಾ ಸಮನ್ವಯಾಧಿಕಾರಿ ಜಗ್ಗೇಶ್ ನೀರಿನ ಸದ್ಬಳಕೆ ಕುರಿತು ಮಾತನಾಡಿ, ಮಳೆನೀರು ಕೊಯ್ಲು ಮತ್ತು ಅಂತರ್ಜಲ ಸಂರಕ್ಷಣೆ ಬಗ್ಗೆ ನಾವು ಹೆಚ್ಚಿನ ಆದ್ಯತೆ ನೀಡುವ ಮೂಲಕ ನಾಳಿನ ಉತ್ತಮ ಭವಿಷ್ಯಕ್ಕಾಗಿ ನೀರಿನ ಸಂರಕ್ಷಣೆಗೆ ಪಣ ತೊಡಬೇಕಿದೆ ಎಂದರು.
ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ. ದಯಾನಂದ ಪ್ರಕಾಶ್ ನೀರಿನ ಸಂರಕ್ಷಣೆ ಕುರಿತ ಪೋಸ್ಟರ್ ಬಿಡುಗಡೆಗೊಳಿಸಿದರು. ಶಾಲೆಯ ಎನ್.ಎಸ್.ಎಸ್.ಕಾರ್ಯಕ್ರಮ ಅಧಿಕಾರಿ ಕೆ.ಟಿ.ಸೌಮ್ಯ, ವಿದ್ಯಾರ್ಥಿಗಳಿಗೆ ನೀರಿನ ಸಂರಕ್ಷಣೆ ಕುರಿತ ಘೋಷಣೆಗಳನ್ನು ಹೇಳಿದರು.
ಎಸ್.ಡಿ.ಎಂ.ಸಿ. ಸದಸ್ಯೆ ಶೃತಿ, ಶಾಲಾ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.