ವಿಜಯವಾಣಿ ಸುದ್ದಿಜಾಲ ಕೊಕ್ಕಡ
ಅಂಬೇಡ್ಕರ್ ಆಶಯದಂತೆ ಎಸ್ಸಿ ಹಾಗೂ ಎಸ್ಟಿ ಸಮುದಾಯದ ಕಲ್ಯಾಣಕ್ಕೆ ದೇಶದಲ್ಲಿ ಹಲವು ಯೋಜನೆಗಳ ಅನುಷ್ಠಾನ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ಎಸ್ಸಿ ಮತ್ತು ಎಸ್ಟಿಗಳಿಗೆ ನೀಡಲಾಗುವ ಅನುದಾನದಲ್ಲಿ 21 ಸಾವಿರ ಕೋಟಿ ರೂ. ಕಡಿತಗೊಳಿಸಿದೆ. ಸರ್ಕಾರದಿಂದ ಅನುದಾನ ಇನ್ನೂ ಬಂದಿಲ್ಲ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಕೊಕ್ಕಡದ ಅಂಬೇಡ್ಕರ್ ಭವನದಲ್ಲಿ ಅಮೃತ ಕೊಕ್ಕಡ ಗ್ರಾಮ ಪಂಚಾಯಿತಿ ವತಿಯಿಂದ ಎಸ್ಸಿ, ಎಸ್ಟಿಗಳಿಗೆ ನೀರಿನ ಡ್ರಮ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ ಮಾತನಾಡಿದರು. ಅಧ್ಯಕ್ಷತೆಯನ್ನು ಪಂಚಾಯಿತಿ ಅಧ್ಯಕ್ಷೆ ಬೇಬಿ ವಹಿಸಿದ್ದರು. ಉಪಾಧ್ಯಕ್ಷ ಪ್ರಭಾಕರ್ ಗೌಡ, ನಿಕಟ ಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ, ಎಸ್‌ಟಿ ಮೋರ್ಚಾದ ತಾಲೂಕು ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ, ಪಿಡಿಒ ದೀಪಕ್ ರಾಜ್, ಗಿರೀಶ್ ಮಹಾವೀರ ಕಾಲೋನಿ, ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು. ಯೋಗೀಶ್ ಆಲಂಬಿಲ ಸ್ವಾಗತಿಸಿದರು. ದೀಪಕ್‌ರಾಜ್ ವಂದಿಸಿದರು. ಕೇಶವ ಕೊಕ್ಕಡ ಕಾರ್ಯಕ್ರಮ ನಿರೂಪಿಸಿದರು.