ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ, ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಹು-ಧಾ ಮಹಾನಗರ, ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿ ನೀರು ಸರಬರಾಜಿಗೆ ಸಂಬಂಧಿಸಿ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಗೆ ಪಾಲಿಕೆ ಸಹಾಯ ವಾಣಿ ಸಂಖ್ಯೆ 7996666247, ಗ್ರಾಮೀಣ ಪ್ರದೇಶಕ್ಕೆ ಜಿಪಂ ಕಾರ್ಯಾಲಯದ ಸಹಾಯ ವಾಣಿ ಸಂಖ್ಯೆ: 0836-2742221, ಜಿಲ್ಲಾಧಿಕಾರಿ ಕಚೇರಿ ಸಹಾಯ ವಾಣಿ ಸಂಖ್ಯೆ 1077 ಹಾಗೂ 0836-2445508 ಸ್ಥಾಪಿಸಲಾಗಿದೆ. ನೀರಿನ ಸಮಸ್ಯೆ ದೂರುಗಳಿದ್ದಲ್ಲಿ ಸಹಾಯವಾಣಿ ಕೇಂದ್ರಗಳಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.