ಜಿಲ್ಲೆ

ಕಾಲುವೆಗಳಿಗೆ ನೀರು ಬಿಡುಗಡೆ

ವಿಠ್ಠಲ ಹಣಮಂತ ಬಾಳೇಕುಂದ್ರಿ

ಬೆಳಗಾವಿ: ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿರುವ ಬೆಳೆ ರಕ್ಷಿಸಲು ತಕ್ಷಣ ಮಲಪ್ರಭಾ ಜಲಾಶಯದಿಂದ ಕಾಲುವೆ ಮೂಲಕ ನೀರು ಬಿಡಲು ಸೂಚನೆ ನೀಡಿದ್ದೇನೆ ಎಂದು ಮಲಪ್ರಭಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷಿ$್ಮ ಹೆಬ್ಬಾಳ್ಕರ್​ ತಿಳಿಸಿದರು.

ನಗರದ ಉತ್ತರ ವಲಯ ಮುಖ್ಯ ಅಭಿಯಂತರರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ನೀರಾವರಿ ಸಲಹಾ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಮದುರ್ಗ, ಸವದತ್ತಿ, ಧಾರವಾಡದ ಕೆಲ ಭಾಗದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವ ಹಿನ್ನೆಲೆ ಬಿತ್ತನೆ ಮಾಡಿರುವ ಬೆಳೆ ಒಣಗುತ್ತಿವೆ. ನೀರು ಬಿಡುವಂತೆ ರೈತರು ಕೋರಿದ್ದರಿಂದ ಶುಕ್ರವಾರ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಲಾಗುವುದು. ನೀರಾವರಿಗೆ 4 ಟಿಎಂಸಿ ನೀರಿನಲ್ಲಿ ಕೊನೆಯ ಹಂತ ತಲುಪುವವರೆಗೂ ನೀರು ಹರಿಸಲಾಗುವುದು ಎಂದು ಹೇಳಿದರು.

ಶಾಸಕ ಸಿ.ಸಿ.ಪಾಟೀಲ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವ ಹಿನ್ನೆಲೆ ಬಹುತೇಕ ಭಾಗದಲ್ಲಿ ನೀರಿಲ್ಲದೆ ಬೆಳೆಗಳು ಒಣಗುತ್ತಿವೆ. ರೈತರು ಬೆಳೆಗಳ ರಕ್ಷಣೆಗಾಗಿ ಕಾಲುವೆಗಳಿಗೆ ನೀರು ಹರಿಸುವಂತೆ ಮನವಿ ಸಲ್ಲಿಸಿದ್ದರು. ಹೀಗಾಗಿ ಸಚಿವೆ ಲಕ್ಷಿ$್ಮ ಹೆಬ್ಬಾಳ್ಕರ್​ ಗಮನಕ್ಕೆ ತರಲಾಗಿತ್ತು. ತಕ್ಷಣ ಮನವಿಗೆ ಸ್ಪಂದಿಸಿ ಸಚಿವರ ಸಭೆ ಕರೆದು ಚರ್ಚಿಸಿ ತಣ ನೀರು ಬಿಡುಗಡೆಗೆ ಆದೇಶ ಮಾಡಿದ್ದಾರೆ ಎಂದರು. ಶಾಸಕ ಬಿ.ಬಿ.ಚಿಮ್ಮನಕಟ್ಟಿ, ಮಹಾಮಂಡಳಿ ಅಧ್ಯ ಸದುಗೌಡ ಪಾಟೀಲ, ಜಿಲ್ಲಾಧಿಕಾರಿ ಮೊಹಮ್ಮದ್​ ರೋಷನ್​, ಮುಖ್ಯ ಇಂಜಿನಿಯರ್​ ಅಶೋಕ ವಾಸನದ ಇತರರಿದ್ದರು.

ಬೆಳೆಗಳ ರಕ್ಷಣೆಗಾಗಿ ರೈತರು ಕಾಲುವೆಗಳಿಗೆ ನೀರು ಹರಿಸುವಂತೆ ಮನವಿ ಸಲ್ಲಿಸಿದ್ದರು. ಹೀಗಾಗಿ ಬೆಳೆ ರಕ್ಷಿಸಲು ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಲಾಗಿದೆ. ವಿಶ್ವಾಸ ವೈದ್ಯ ಶಾಸಕ