ಬೆಂಗಳೂರು: ಬೆಂಗಳೂರು ಜಲಮಂಡಳಿಯ ವೆಲ್ಲಾರ ಜಂಕ್ಷನ್ ಬಳಿ ನೀರು ಸರಬರಾಜು ಮತ್ತು ಒಳಚರಂಡಿ ಕೊಳವೆ ಮಾರ್ಗಗಳನ್ನು ಸ್ಥಳಾಂತರಿಸುವ ಕಾಮಗಾರಿ ಕೈಗೊಂಡಿರುವುದರಿಂದ ಶನಿವಾರ (ಸೆ.19) ಬೆಳಗ್ಗೆ 7ರಿಂದ ರಾತ್ರಿ 10 ಗಂಟೆಯವರೆಗೆ ನಗರದ ಬಹುತೇಕ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವ್ಯತ್ಯಯ :
ದೊಮ್ಮಲೂರು ವಿಲೇಜ್, ದೊಮ್ಮಲೂರು ಲೇಔಟ್, ಅಮರ ಜ್ಯೋತಿ ಬಡಾವಣೆ, ಎಚ್.ಎ.ಎಲ್.2ನೇಹಂತ ಕೋಡಿಹಳ್ಳಿ, ಈಜೀಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ತಿಳಿಸಿದೆ.