ಮೈಸೂರು: ಮೈಸೂರು-ಬೆಂಗಳೂರು ಹೆದ್ದಾರಿ ಯೋಜನೆ ಮಾಡಿದವರು ನಾವು. ಹೀಗಾಗಿ, ಅದರ ಕ್ರೆಡಿಟ್ ನಮ್ಮ ಸರ್ಕಾರಕ್ಕೆ ಸಲ್ಲಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.
ಯೋಜನೆಯಲ್ಲಿ ಸಂಸದ ಪ್ರತಾಪ ಸಿಂಹನದ್ದಾಗಲಿ ಅಥವಾ ಬಿಜೆಪಿ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ. ಪ್ರತಾಪ ಪ್ರತಿನಿಧಿಸುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಈ ಹೆದ್ದಾರಿಯ ಕೆಲವೇ ಕಿ.ಮೀ. ಮಾತ್ರವೇ ಸೇರುತ್ತದೆ. ಆದರೂ ನಮ್ಮದು, ನಾವೇ ಮಾಡಿಸಿದ್ದು ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ.
ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪಗೆ ಈ ರಸ್ತೆಯ ಎಲ್ಲ ಮಾಹಿತಿಯೂ ಗೊತ್ತಿದೆ. ನಮ್ಮ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಅವರೇ ಮುಂದೆ ನಿಂತು ಈ ಯೋಜನೆಯನ್ನು ಮಾಡಿಸಿದ್ದರು ಎಂದು ಸಮರ್ಥಿಸಿಕೊಂಡರು. ಉದ್ಘಾಟನೆಗೆ ಸಿದ್ದವಾಗಿರುವ ಮೈಸೂರು-ಬೆಂಗಳೂರು ಹೆದ್ದಾರಿಯನ್ನು ಮಾರ್ಚ್ 9 ರಂದು ಪರಿಶೀಲಿಸುತ್ತೇನೆ ಎಂದರು.