ಜಿಲ್ಲೆ

ಒಂದಿಂಚೂ ಬೇರೆಯವರ ಜಾಗಕ್ಕೆ ನಾವು ಬೇಲಿ ಹಾಕಿಲ್ಲ: ನಿಖಿಲ್|Not fenced

ಬೆಂಗಳೂರು: ಕೇತಗಾನಹಳ್ಳಿ ಜಮೀನಿನಲ್ಲಿ ಒಂದೇ ಒಂದು ಇಂಚು ಬೇರೆ ಅವರ ಜಾಗಕ್ಕೆ ನಾವು ಬೇಲಿ ಹಾಕಿಲ್ಲ(We have not fenced off even an inch of someone else's land) ಎಂದು  ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ. ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಸ್ಪಷ್ಟಪಡಿಸಿದರು.

ಜೆ.ಪಿ.ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇತಗಾನಹಳ್ಳಿ ಜಮೀನಿಗೆ ಸಂಬಂಧಿಸಿದಂತೆ ನಾನು ಎಲ್ಲ ದಾಖಲಾತಿಗಳನ್ನು ಕಲೆ ಹಾಕಿದ್ದೇನೆ. ಇದರ ಬಗ್ಗೆ ನಾನು ಸುದ್ದಿಗೋಷ್ಟಿ ಕರೆದು ಮಾತನಾಡುತ್ತೇನೆ. 46 ಎಕರೆ ಜಮೀನು ಕುಮಾರಸ್ವಾಮಿ ರೈತರಿಂದ ಖರೀದಿ ಮಾಡಿರುವ ಜಮೀನು. ಅದರಲ್ಲಿ ಸರ್ವೆ ನಂಬರ್ 7,8,9, ಇವು ಪಿ ನಂಬರ್ ಜಮೀನು. ಪೋಡಿ ಆಗದ ಜಮೀನು. ಪೋಡಿ ಆಗದ ಜಮೀನು ತೆಗೆದುಕೊಳ್ಳೋದಕ್ಕೆ ಅವತ್ತು ಅವಕಾಶ ಇತ್ತು. ಪೋಡಿ ಸರಿ ಮಾಡಬೇಕಿರೋದು ಸರ್ಕಾರ. ನಾವು ಅರ್ಜಿ ಕೊಟ್ಟರೂ ಸರ್ಕಾರ ಅದನ್ನು ಮಾಡಿಲ್ಲ ಎಂದು ಕಿಡಿಕಾರಿದರು.

ಸರ್ವೆ ನಂಬರ್ 7 ರಲ್ಲಿ 1 ಎಕರೆ ನಾವು ಅನುಭವದಲ್ಲಿ ಇದ್ದೇವೆ. ಉಳಿದ 4 ಎಕರೆ ಪೋಡಿ ದುರಸ್ತಿ ಮಾಡಬೇಕು. ಅದನ್ನ ಸರ್ಕಾರ ಮಾಡಬೇಕು. ರೈತರ ಜಮೀನು ಖರೀದಿ ಮಾಡಿದಾಗ ರೈತರು ಹಾಕಿದ್ದ ಬೌಂಡರಿಯನ್ನು ನಾವು ಹಾಗೇ ಉಳಿಸಿಕೊಂಡಿದ್ದೇವೆ. ಅರ್ಧ ಇಂಚು ಬೇರೆಯದಕ್ಕೆ ಬೇಲಿ ಹಾಕಿಲ್ಲ. ಕುಮಾರಸ್ವಾಮಿ ಸಿಎಂ ಆದಾಗ ಎಷ್ಟೋ ಜನರಿಗೆ ಸಾಗುವಳಿ ಚೀಟಿ ಕೊಡಿಸಿದ್ದಾರೆ. ಎರಡು ಬಾರಿ ಸಿಎಂ ಆಗಿದ್ದರು. ತಪ್ಪಿದ್ದರೆ ಆಗ ಸರಿ ಮಾಡಿಸಿಕೊಳ್ಳಬಹುದಿತ್ತು. ಆದರೆ ಅದನ್ನು ಮಾಡಿಲ್ಲ. ನೋಟಿಸ್ ಕೊಡದೇ ತೆರವು ಮಾಡುತ್ತೇನೆ ಎಂದು ಡಿಸಿ ಬಂದರೆ ಅದು ಕಾನೂನುಬಾಹಿರ. ಡಿಸಿ ಅವರು 14 ಎಕರೆ ಜಮೀನು ಒತ್ತುವರಿ ಆಗಿದೆ ಎನ್ನುತ್ತಾರೆ. ಯಾವ 14 ಎಕರೆ ಒತ್ತುವರಿ ಆಗಿದೆ ಎಂದು ನಿಖಿಲ್ ಪ್ರಶ್ನಿಸಿದರು.

ಆರೋಪ ಬಂದರೆ ಅಪರಾಧಿ ಮಾಡುತ್ತಾರೆ

ಕಾಲ ಹೇಗಿದೆ ಎಂದರೆ ಆರೋಪ ಬಂದ ಕೂಡಲೆ ಅಪರಾಧಿ ಮಾಡುತ್ತಾರೆ. ರೀಲ್ಸ್, ಶಾರ್ಟ್ಸ್ ಕಾಲ ಇದು. ಅಂತಿಮವಾಗಿ ಕುಮಾರಸ್ವಾಮಿ ಅವರ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕೆ ತರಬೇಕು, ಮಸಿ ಬಳಿಯಬೇಕು ಅಷ್ಟೇ ತಾನೆ? ಇದರ ಹಿಂದೆ ಯಾರ‌್ಯಾರು ಇದ್ದಾರೆ ಎಂದು ಈಗ ಚರ್ಚೆ ಮಾಡುವುದಿಲ್ಲ. ಎಲ್ಲ ದಾಖಲಾತಿ ತೆಗೆಸಿದ್ದೇನೆ. ಸಂಪೂರ್ಣ ಮಾಹಿತಿ ಕೊಡುತ್ತೇನೆ ಎಂದು ತಿಳಿಸಿದರು.

ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಲು ಅಡ್ಡ ಹಾಕಿದ್ದು ಕುಮಾರಸ್ವಾಮಿ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಕುರಿತ ಪ್ರಶ್ನೆಗೆ, ಅವರು ಕೈಲಾಗದೇ ಇರೋರು ಕುಣಿಯೋದಕ್ಕೆ ನೆಲ ಡೊಂಕು ಎಂದರಂತೆ ಎಂದು ಟಾಂಗ್ ಕೊಟ್ಟರು.

ಕುಮಾರಸ್ವಾಮಿ ಅವರು ಕೇಂದ್ರದ ಮೇಲೆ ಒತ್ತಡ ಹಾಕಿದ್ದಾರೆ ಅನ್ನೋದಕ್ಕೆ ಏನಾದರೂ ಸಾಕ್ಷಿ ಇದೆಯಾ? ರಾಮನಗರ ಜಿಲ್ಲೆಯ ಅಸ್ಮಿತೆ ಕಾಪಾಡಬೇಕು ಎನ್ನುವುದು ಜಿಲ್ಲೆಯ ಜನರ ಭಯಕೆ. ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಿದರೆ ಅದು ಅಭಿವೃದ್ಧಿ ಆಗುತ್ತಾ? ಎಂದು ಕಿಡಿಕಾರಿದರು.

ಸರ್ಕಾರ ಹಗರಣದಲ್ಲಿ ಮುಳುಗಿದೆ

ಸ್ಮಾರ್ಟ್ ಮೀಟರ್‌ನಲ್ಲಿ ದೊಡ್ಡ ಅಕ್ರಮ ನಡೆಯುತ್ತಿದೆ. 7500 ಸಾವಿರ ಕೋಟಿ ಹಗರಣ ಅದು. ಬ್ಲ್ಯಾಕ್ ಲಿಸ್ಟ್ ನಲ್ಲಿ ಇರುವವರಿಗೆ ಸ್ಮಾರ್ಟ್ ಮೀಟರ್ ಟೆಂಡರ್ ಕೊಟ್ಟಿದ್ದಾರೆ.1500 ರೂ ಮೀಟರ್ ಗೆ 5500 ರೂ. ಕೊಟ್ಟು ಪಡೆಯುತ್ತಿದ್ದಾರೆ ಎಂದು ಕಿಡಿಕಾರಿದರು.

ಎಲೆಕ್ಟ್ರಿಕ್ ಫೋಲ್ ಮಾಡುವವನಿಗೆ ಮೀಟರ್ ಟೆಂಡರ್ ಕೊಟ್ಟಿದ್ದೀರಾ? ಇಷ್ಟು ದೊಡ್ಡ ಹಗರಣ ನಡೆಯುತ್ತಿದೆ. ಹೆಜ್ಜೆ ಹೆಜ್ಜೆಗೂ ಈ ಸರ್ಕಾರ ಹಗರಣದಲ್ಲಿ ಮುಳುಗಿದೆ ಎಂದು ನಿಖಿಲ್ ವಾಗ್ದಾಳಿ ನಡೆಸಿದರು.