ಡಾ.ಸೈಯದ್ ನಾಸೀರ್ ಹುಸೇನ್  
ಜಿಲ್ಲೆ

ಲೋಕಸಭೆ ಚುನಾವಣೆಯಲ್ಲಿ 28 ಕ್ಷೇತ್ರದಲ್ಲಿ ಗೆಲ್ಲುತ್ತೇವೆ

ಬಳ್ಳಾರಿ: ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಮೊದಲ ಬಾರಿಗೆ ಬಳ್ಳಾರಿಗೆ ಭಾನುವಾರ ಆಗಮಿಸಿದ ರಾಜ್ಯಸಭೆ ಸದಸ್ಯ ಡಾ. ಸೈಯದ್ ನಾಸೀರ್ ಹುಸೇನ್‌ರನ್ನು ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ನಲ್ಲಿ ನನಗೆ ಉತ್ತಮ ಸ್ಥಾನಮಾನ ನೀಡಿದ್ದಾರೆ. ಲೋಕಸಭೆ ಚುನಾವಣೆಗೆ ಈ ಭಾಗದಿಂದ ಹೆಚ್ಚು ಸಂಸದರನ್ನು ಗೆಲ್ಲಿಸುತ್ತೇವೆ.

ವಿಧಾನಸಭೆ ಚುನಾವಣೆಯಲ್ಲಿ ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಏಳು ಶಾಸಕರನ್ನು ಗೆಲ್ಲಿಸಿದ್ದೇವೆ.

ಲೋಕಸಭೆ ಚುನಾವಣೆಯಲ್ಲಿ 28 ಕ್ಷೇತ್ರದಲ್ಲಿ ಗೆಲ್ಲುತ್ತೇವೆ. ಸ್ಥಳೀಯ ಅಥವಾ ವಲಸಿಗರಿಗೆ ಟಿಕೆಟ್ ನೀಡುವುದು ಪಕ್ಷಕ್ಕೆ ಬಿಟ್ಟಿರುವ ವಿಚಾರ.

ಯಾರಿಗೆ ಟಿಕೆಟ್ ನೀಡುತ್ತಾರೋ ಅವರನ್ನು ಗೆಲ್ಲಿಸುವ ಜವಾಬ್ದಾರಿ ನನ್ನದು. ಪಕ್ಷ ಯಾವ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ, ಶಾಸಕ ನಾರಾ ಭರತ್‌ರೆಡ್ಡಿ, ಮೇಯರ್ ಡಿ.ತ್ರಿವೇಣಿ, ಮುಖಂಡ ಬೋಯಪಾಟಿ ವಿಷ್ಣುವರ್ಧನ ಇದ್ದರು. ಚಿತ್ರ: