ಜಿಲ್ಲೆ

ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಧಿಕ ಮಳೆ ಸಂಭವ, ರೆಡ್ ಅಲರ್ಟ್​

ಬೆಂಗಳೂರು:  ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಧಿಕ  ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ.