ಜಿಲ್ಲೆ

ಕುಡಚಿ ವಾರದ ಸಂತೆ ರದ್ದು

Belagavi

ಕುಡಚಿ: ಕರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಆದೇಶದ ಮೇರೆಗೆ ಕುಡಚಿ ಪಟ್ಟಣದಲ್ಲಿ ಪ್ರತಿ ಶುಕ್ರವಾರ ನಡೆಯುತ್ತಿದ್ದ ವಾರದ ಸಂತೆಯನ್ನು ರದ್ದುಗೊಳಿಸಲಾಗಿದೆ ಎಂದು ಕುಡಚಿ ಪುರಸಭೆ ಮುಖ್ಯಾಧಿಕಾರಿ ಎಸ್.ಎ. ಮಹಾಜನ ತಿಳಿಸಿದ್ದಾರೆ.

ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಸಹಕರಿಸಬೇಕು. ಎಲ್ಲರೂ ಮಾಸ್ಕ್ ಧರಿಸಿಕೊಳ್ಳಬೇಕು. ಮನೆಯ ಸುತ್ತಮುತ್ತಲಿನ ಜಾಗವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಹೊರಗಿನಿಂದ ಬರುವ ಜನರ ಬಗ್ಗೆ ನಿಗಾವಹಿಸಬೇಕು ಎಂದು ಮಹಾಜನ ತಿಳಿಸಿದ್ದಾರೆ.