ಪಿರಿಯಾಪಟ್ಟಣದ ವಕೀಲರ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಎಂ.ರಾಜು ಮಾತನಾಡಿದರು. ಎಂ.ಆರ್.ಯೋಗೇಶ್, ಶ್ವೇತಾ, ಧನಪಾಲ್ ಇತರರು ಇದ್ದರು. 
ಜಿಲ್ಲೆ

ವಕೀಲ ವೃತ್ತಿಯಲ್ಲಿ ಯಾರೂ ಪರಿಪೂರ್ಣರಲ್ಲ

ನಾಗೇಶ ಎಸ್

ಪಿರಿಯಾಪಟ್ಟಣ: ವಕೀಲ ವೃತ್ತಿಯಲ್ಲಿ ಯಾರೂ ಪರಿಪೂರ್ಣರಲ್ಲ. ವೃತ್ತಿಯ ಕೊನೆಯ ದಿನಗಳವರೆಗೂ ಕಲಿಯುವುದು ಇರುತ್ತದೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಎಂ.ರಾಜು ಅಭಿಪ್ರಾಯಪಟ್ಟರು.

ಪಟ್ಟಣದ ವಕೀಲರ ಸಂಘದ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಸ್ವಾಗತ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುವಾಗ ಆಳದಲ್ಲಿರುವ ಸತ್ಯವನ್ನು ಹುಡುಕಿ ಕಕ್ಷಿದಾರರಿಗೆ ನ್ಯಾಯ ಒದಗಿಸಿ ಕೊಡಬೇಕಾಗಿರುತ್ತದೆ. ಆ ಸಂದರ್ಭದಲ್ಲಿ ಬಾಧಿತರಿಗೆ ನೋವಾದರೂ ಸಹಿಸಿಕೊಳ್ಳಬೇಕು. ಜಾತಿ, ಧರ್ಮದ ಆಧಾರದಲ್ಲಿ ಪಕ್ಷಪಾತ ಧೋರಣೆ ಮಾಡಲು ಸಾಧ್ಯವಿಲ್ಲ. ಇದನ್ನು ವಕೀಲರು ಮೊದಲು ಮನಗಾಣಬೇಕು ಎಂದು ತಿಳಿಸಿದರು.

ವಕೀಲರ ಸಂಘದ ಅಧ್ಯಕ್ಷ ಧನಪಾಲ್ ಮಾತನಾಡಿ, ಪ್ರಾಮಾಣಿಕ, ಪಾರದರ್ಶಕ ಮತ್ತು ಉತ್ತಮವಾಗಿ ನ್ಯಾಯದಾನ ಮಾಡಲು ವಕೀಲರು ಎಂದಿಗೂ ಸಹಕರಿಸಲು ಸಿದ್ಧವಿದ್ದಾರೆ. ಕಕ್ಷಿದಾರರಿಗೆ ನ್ಯಾಯ ಒದಗಿಸಿಕೊಡುವುದು ನಮ್ಮ ಕರ್ತವ್ಯ ಎಂದು ಭಾವಿಸಿದ್ದೇವೆ. ನ್ಯಾಯಾಧೀಶರಿಗೆ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದ್ದೇನೆ ಎಂದರು.
ನ್ಯಾಯಾಧೀಶರಾದ ಎಂ.ಆರ್.ಯೋಗೇಶ್, ಶ್ವೇತಾ ಮಾತನಾಡಿದರು. ವಕೀಲರ ಸಂಘದ ಕಾರ್ಯದರ್ಶಿ ಶಂಕರ್, ಖಜಾಂಚಿ ಹರೀಶ್ ಸೇರಿದಂತೆ ಹಿರಿಯ, ಕಿರಿಯ ವಕೀಲರು ಹಾಜರಿದ್ದರು.