ಕಡಬ: ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಾಮಾಜಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು. ಕೇವಲ ಪುಸ್ತಕದ ವಿಚಾರಗಳು ದಾರಿದೀಪವಾಗುವುದಿಲ್ಲ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಬೆಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ, ಶೈಕ್ಷಣಿಕ ಚಟುವಟಿಕೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬೆಳಂದೂರು ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಶಂಕರ್ ಭಟ್ ಅಧ್ಯಕ್ಷತೆ ವಹಿಸಿದ್ದರು. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಅಧ್ಯಕ್ಷ ಉಮೇಶ್ ನಾಯಕ್, ಸಹಾಯಕ ಪ್ರಾಧ್ಯಾಪಕಿ ಅರ್ಪಿತಾ, ವಿದ್ಯಾರ್ಥಿ ಪ್ರತಿನಿಧಿಗಳಾದ ಲಿಖಿತ, ಪ್ರತೀಕ್, ದಿವ್ಯ, ವಿಜಿತ್ ಉಪಸ್ಥಿತರಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷೆ ವಚನಾ ಪ್ರದೀಪ್ ಅರುವಗುತ್ತು ಪ್ರಾಸ್ತಾವಿಸಿದರು. ಐಕ್ಯುಎಸಿ ಸಂಚಾಲಕ ಮಹೇಶ್ ಬಿ.ಎಸ್. ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ವಿನುತಾ ವಿ. ವಂದಿಸಿದರು. ಲಿಖಿತಾ ಮತ್ತು ಶ್ವೇತಾ ಕಾರ್ಯಕ್ರಮ ನಿರೂಪಿಸಿದರು.
ದಾನಿಗಳಿಗೆ ಗೌರವ, ಪ್ರತಿಭಾ ಪುರಸ್ಕಾರ
ಬೆಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಶುಲ್ಕ ಭರಿಸಿದ 26 ದಾನಿಗಳಿಗೆ ಹಾಗೂ ಕಾಲೇಜಿನ ಮಧ್ಯಾಹ್ನ ಅನ್ನದಾಸೋಹ ಕಾರ್ಯಕ್ರಮಕ್ಕೆ ಸಾಮಗ್ರಿ ಒದಗಿಸಿದ 20 ದಾನಿಗಳಿಗೆ ಗೌರವಾರ್ಪಣೆ, ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.