ವಿಜಯಪುರ ನಗರಕ್ಕೆ ಆಗಮಿಸಿದ ಕಿತ್ತೂರು ರಾಣಿ ಚನ್ನಮ್ಮ ವಿಜಯಜ್ಯೋತಿ ಯಾತ್ರೆ ರಥಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್​ ಪೂಜೆ ಸಲ್ಲಿಸಿದರು. ಹರೀಶಗೌಡ ಪಾಟೀಲ, ಸೋಮಲಿಂಗ ಗೆಣ್ಣೂರ, ನಿಂಗಪ್ಪ ಗೋಠೆ ಮತ್ತಿತರರಿದ್ದಾರೆ. 
ಜಿಲ್ಲೆ

ಚನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಸ್ವಾಗತ

ವಿಜಯಪುರ : ಕಿತ್ತೂರು ರಾಣಿ ಚನ್ನಮ್ಮ 200ನೇ ಜಯಂತಿ ಹಿನ್ನೆಲೆ ನಗರಕ್ಕೆ ಮಂಗಳವಾರ ಆಗಮಿಸಿದ ಕಿತ್ತೂರು ರಾಣಿ ಚನ್ನಮ್ಮ ವಿಜಯಜ್ಯೋತಿ ಯಾತ್ರೆ ರಥಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್​ ಸ್ವಾಗತಿಸಿ ಪೂಜೆ ಸಲ್ಲಿಸಿದರು.

ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಬಿ.ಎಂ. ಪಾಟೀಲ, ಸಮಾಜದ ಮುಖಂಡರಾದ ಹರೀಶಗೌಡ ಪಾಟೀಲ, ಪ್ರಭುಗೌಡ ಪಾಟೀಲ, ಸಂಜುಗೌಡ ಪಾಟೀಲ, ನಿಂಗನಗೌಡ ಪಾಟೀಲ, ನಿಂಗಪ್ಪ ಸಂಗಾಪುರ, ಬಸವರಾಜ ಬಾಗೇವಾಡಿ, ಮಹಾದೇವಿ ಗೋಕಾಕ, ಲಲಿತಾ ಬಿರಾದಾರ, ಬಸಮ್ಮ ಗುಜರಿ, ಜ್ಯೋತಿ ಪಾಗದ, ಶೋಭಾ ಬಿರಾದಾರ, ಶರಣಬಸು ಗಂಗಶೆಟ್ಟಿ, ಅಡಿವೆಪ್ಪ ಸಾಲಗಲ್ಲ, ಶ್ರೀಶೈಲ ಮುಳಜಿ, ದೇವೇಂದ್ರ ಮೀರೆಕರ, ದಾನೇಶ ಆವಟಿ, ವಿವಿಧ ಇಲಾಖೆ ಅಧಿಕಾರಿಗಳು ಮತ್ತಿತರರಿದ್ದರು.