ಕೊಪ್ಪ: ಕರ್ನಾಟಕ ಸಂಭ್ರಮ-50ರ ಅಂಗವಾಗಿ ತಾಲೂಕು ಕೇಂದ್ರಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಯನ್ನು ಪಟ್ಟಣ ಪಂಚಾಯಿತಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ನಂತರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ನಂತರ ಹರಿಹರಪುರ, ನಾರ್ವೆ, ಜಯಪುರ ಮೂಲಕ ಬಾಳೆಹೊನ್ನೂರು ಕಡೆಗೆ ರಥವನ್ನು ಬೀಳ್ಕೊಡಲಾಯಿತು.
ತಹಸೀಲ್ದಾರ್ ಲಿಖಿತಾ ಮೋಹನ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜೆ.ಎಂ.ಶ್ರೀಹರ್ಷ, ಕಸಾಪ ಪದಾಧಿಕಾರಿ ಎಸ್.ಎನ್.ಚಂದ್ರಕಲಾ, ಸಿರಿಗನ್ನಡ ವೇದಿಕೆ ಅಧ್ಯಕ್ಷ ಚಾವಲ್ಮನೆ ಸುರೇಶ್ ನಾಯಕ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಫ್ರಾನ್ಸಿಸ್ ಕಾರ್ಡೋಜ, ಬಿಇಒ ಜ್ಯೋತಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ.ಸಿ.ರಾಜೇಂದ್ರ, ಡಿವೈಎಸ್ಪಿ ಬಾಲಾಜಿ ಸಿಂಗ್, ಪಿಎಸ್‌ಐ ಜಿ.ಕೆ.ಬಸವರಾಜ್ ಇದ್ದರು.