ಜಿಲ್ಲೆ

ಬಂಟ್ವಾಳದಲ್ಲಿ ಕನ್ನಡ ರಥಕ್ಕೆ ಸ್ವಾಗತ

ಸೌಮ್ಯ ಆರ್

ಬಂಟ್ವಾಳ: ಕರ್ನಾಟಕದ ಸುವರ್ಣ ಸಂಭ್ರಮದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ರಥ ಬಂಟ್ವಾಳ ತಾಲೂಕಿಗೆ ಬುಧವಾರ ಪ್ರವೇಶಿಸಿದ್ದು, ಬಿ.ಸಿ.ರೋಡ್‌ನಲ್ಲಿ ತಾಲೂಕು ಆಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಸಹಿತ ನಾನಾ ಇಲಾಖೆಗಳ ವತಿಯಿಂದ ಸ್ವಾಗತಿಸಲಾಯಿತು.

ಬಂಟ್ವಾಳ ತಹಸೀಲ್ದಾರ್ ಡಿ.ಅರ್ಚನಾ ಭಟ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ ರಥದಲ್ಲಿರುವ ಭುವನೇಶ್ವರಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಮಾರ್ಗದರ್ಶನ ಮಂಡಳಿ ಸದಸ್ಯ ಹರೀಶ ಮಾಂಬಾಡಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸುನೀತಾ, ಬಂಟ್ವಾಳ ನಗರ ಠಾಣೆ ಇನ್‌ಸ್ಪೆಕ್ಟರ್ ಅನಂತಪದ್ಮನಾಭ, ಉಪತಹಸೀಲ್ದಾರ್‌ಗಳಾದ ನವೀನ್ ಬೆಂಜನಪದವು, ದಿವಾಕರ ಮುಗುಳ್ಯ, ನರೇಂದ್ರನಾಥ ಮಿತ್ತೂರು, ತಾಲೂಕು ಪಂಚಾಯಿತಿ ಅಧಿಕಾರಿ ಪ್ರಕಾಶ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಸಮಿತಿಯ ಸದಸ್ಯ ಪೂವಪ್ಪ ನೇರಳಕಟ್ಟೆ, ಪಾಣೆಮಂಗಳೂರು ಹೋಬಳಿ ಅಧ್ಯಕ್ಷ ಪಿ.ಮುಹಮ್ಮದ್, ವಿಟ್ಲ ಹೋಬಳಿ ಅಧ್ಯಕ್ಷ ಗಣೇಶ ಪ್ರಸಾದ ಪಾಂಡೇಲು, ಕಾರ್ಯಕಾರಿ ಸಮಿತಿ ಸದಸ್ಯರಾದ ರಜನಿ ಚಿಕ್ಕಯ್ಯಮಠ, ನಾನಾ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.