ಬೆಂಗಳೂರು: ಕುಂದಗೋಳ ಕ್ಷೇತ್ರದ ಶಾಸಕ ಎಂ.ಆರ್. ಪಾಟೀಲ ಅವರು ಪೋಡಿಮುಕ್ತ ಗ್ರಾಮ ಯೋಜನೆ ಆರಂಭಿಸಲು ವಿಧಾನಸಭೆಯಲ್ಲಿ ಒತ್ತಾಯಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಯೋಜನೆ ಮರು ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ನಗರ ಪ್ರದೇಶ ಹೊರತುಪಡಿಸಿ ಉಳಿದ 174 ವಿಧಾನಸಭಾ ಕ್ಷೇತ್ರಗಳಲ್ಲಿ ಪೋಡಿ ಯೋಜನೆಯನ್ನು ಈ ಹಿಂದೆ ಬಿಜೆಪಿ ಸರ್ಕಾರ ಪ್ರಾರಂಭಿಸಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಜೂ. 30 ರಂದು ಸ್ಥಗಿತಗೊಳಿಸಿತ್ತು. ಇದರಿಂದಾಗಿ ಕುಂದಗೋಳ ಸೇರಿ ರಾಜ್ಯದ ಬಹುತೇಕ ಕ್ಷೇತ್ರದ ಜನರಿಗೆ ತೊಂದರೆ ಉಂಟಾಗಿತ್ತು.
ಇದರ ಬಗ್ಗೆ ಪಾಟೀಲ ಧ್ವನಿ ಎತ್ತಿದ್ದರಿಂದ ರಾಜ್ಯ ಸರ್ಕಾರ ಮರು ಆರಂಭಿಸಿದ್ದು, ಸರ್ಕಾರದ ನಡೆಯನ್ನು ಶಾಸಕರು ಸ್ವಾಗತಿಸಿದ್ದಾರೆ.