ಜಿಲ್ಲೆ

ಸಮುದಾಯ ವಾಚನಾಲಯ ಶ್ಲಾಘಿಸಿದ ಸಚಿವ ದಿನೇಶ್ ಗುಂಡೂರಾವ್

Mangaluru - Hariprasad Rai




ಮಂಗಳೂರು : ರೋಗಿಗಳಲ್ಲಿ ಧನಾತ್ಮಕ ಚಿಂತನೆಗೆ ಓದುವ ಹವ್ಯಾಸ ಪೂರಕವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ನಗರದ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ
ಸಹಭಾಗಿತ್ವದಲ್ಲಿ ಆರಂಭಿಸಲಾಗಿರುವ ಸಮುದಾಯ ವಾಚನಾಲಯಕ್ಕೆ ಬುಧವಾರ ಭೇಟಿ ನೀಡಿದ ಸಂದರ್ಭ ಅವರು ಇದೊಂದು ಮಾದರಿ ವಾಚನಾಲಯವಾಗಿ ಕಾರ್ಯನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಇತರ ಸರ್ಕಾರಿ ಆಸ್ಪತ್ರೆಗಳಲ್ಲಿ ಆರಂಭಿಸಲು ಇದು ಪ್ರೇರಣೆಯಾಗಿದೆ .ವೆನ್ಲಾಕ್ ಆಸ್ಪತ್ರೆಯಲ್ಲಿ ಸುಸಜ್ಜಿತ ಸಮುದಾಯ ವಾಚನಾಲಯ ಅರಂಭಿಸಲು ಶೀಘ್ರ
ಕೊಠಡಿ ಒದಗಿಸಲಾಗುವುದು ಎಂದರು.
ಎಂಎಲ್‌ಸಿ ಹರೀಶ್‌ಕುಮಾರ್ ,ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಪಂ ಸಿಇಒ ಡಾ. ಅನಂದ್‌ಮ ಜಿಲ್ಲಾ ಅರೋಗ್ಯಾಧಿಕಾರಿ
ಡಾ. ಅಲೂರು ತಿಮ್ಮಯ್ಯ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸದಾಶಿವ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಇಕ್ಬಾಲ್ ,ಜಿಲ್ಲಾ ವಾರ್ತಾಧಿಕಾರಿ ಖಾದರ ಷಾ , ಡಾ.ಕೆ.ಆರ್.ಕಾಮತ್, ರೆಡ್‌ಕ್ರಾಸ್ ಸಂಸ್ಥೆಯ ನಿರ್ದೇಶಕ ರವೀಂದ್ರನಾಥ್ ಉಚ್ಚಿಲ್ ಉಪಸ್ಥಿತರಿದ್ದರು. ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿ , ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ ವಂದಿಸಿದರು. ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.