ಜಿಲ್ಲೆ

ಮೋದಿ ಉದ್ದೇಶಿಸಿಯೇ ಹೇಳಿದ್ದಾರೆ

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ಆರ್​ಎಸ್​ಎಸ್ ಮುಖ್ಯಸ್ಥ ಮೋಹನ ಭಾಗವತ ಅವರು, 75 ವರ್ಷ ಮೀರಿದವರು ರಾಜಕೀಯದಿಂದ ನಿವೃತ್ತಿ ಪಡೆಯಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿಯೇ ಹೇಳಿದ್ದಾರೆ ಎಂದು ಸರ್ಕಾರದ ಮುಖ್ಯ ಸಚೇತಕ, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಪ್ರತಿಕ್ರಿಯಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಸಂದರ್ಭದಲ್ಲಿ ಭಾಗವತ ಅವರ ಹೇಳಿಕೆ ಅತ್ಯಂತ ಮಹತ್ವದ್ದಾಗಿದೆ. ಇದು ಅವರ ಆಂತರಿಕ ವಿಚಾರವಾಗಿದ್ದರೂ, ಪ್ರಸ್ತುತವಾಗಿದೆ. 75 ವರ್ಷಗಳಾಗಿವೆ ಎಂದು ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಿದವರು ಈಗ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ಐಪಿಎಲ್ ಚಾಂಪಿಯನ್ ಆರ್​ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ನಡೆದ ಕಾಲ್ತುಳಿತದ ಘಟನೆಗೆ ಸಂಬಂಧಿಸಿದಂತೆ ನ್ಯಾ. ಜಾನ್ ಮೈಕಲ್ ಕುನ್ಹಾ ಸಂಪೂರ್ಣ ಮಾಹಿತಿ ಸಂಗ್ರಹಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಬಿಜೆಪಿ ನಾಯಕರು ಯಾವಾಗಲೂ ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನೇ ಮಾಡುತ್ತಾರೆ. ಮೈಕಲ್ ಕುನ್ಹಾ ಅವರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ ವ್ಯಕ್ತಿಯಲ್ಲ. ಬಿಜೆಪಿಯವರು ತಪ್ಪು ಹುಡುಕುವ ಬದಲು, ಸಲಹೆ ಸೂಚನೆಗಳನ್ನು ನೀಡಲಿ ಎಂದು ಹೇಳಿದರು.