ಲಕ್ಷ್ಮೇಶ್ವರ: ಗಜೇಂದ್ರಗಡದಲ್ಲಿ ನಡೆದ ಅಹಿಂದ ಒಕ್ಕೂಟದ ಪ್ರತಿಭಟನಾ ಸಭೆಯಲ್ಲಿ ಶಾಸಕ ಜಿ.ಎಸ್. ಪಾಟೀಲ ಆಡಿದ ಮಾತುಗಳಲ್ಲಿ ತಪ್ಪೆನಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ. ಈಶ್ವರ ಪ್ರಶ್ನಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೋದಿ ಅವರ ತಪ್ಪನ್ನು ಟೀಕಿಸಿದರೆ ಅದು ದೇಶ ದ್ರೋಹವೆ? ಜಿ.ಎಸ್. ಪಾಟೀಲ ಕುಟುಂಬ ಈ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ದೊಡ್ಡಮೇಟಿ ಅವರೊಂದಿಗೆ ಕೈಜೋಡಿಸಿದೆ. ಅವರ ತಾಯಿ ಬಸಮ್ಮನವರು ಶಿಕ್ಷಣ ಕ್ರಾಂತಿ ಪ್ರಾರಂಭಿಸಿದರು. ಇಂತಹ ಕುಟುಂಬದಿಂದ ಬಂದ ಜಿ.ಎಸ್. ಪಾಟೀಲ ಅವರು ಮೋದಿ ಅವರು ಮಾಡುತ್ತಿರುವ ಕಾರ್ಯವನ್ನು ಟೀಕಿಸಿದರೆ ಅದು ದೇಶದ್ರೋಹವೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷ, ಹಿಂದುಳಿದವರು, ಬಡವರ ಪರ ಸರ್ಕಾರ ನಡೆಸುತ್ತಿರುವುದನ್ನು ಬಿಜೆಪಿ ಮತ್ತು ಜೆಡಿಎಸ್ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಸರ್ಕಾರ ಉರುಳಿಸಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಜನತೆ ಮಾತನಾಡಿಕೊಳ್ಳುತ್ತಿದ್ದಾರೆ. ಅದೇ ಮಾತನ್ನು ಜಿ.ಎಸ್. ಪಾಟೀಲ ಹೇಳಿದ್ದಾರೆ. ಅದನ್ನು ವಿರೋಧ ಪಕ್ಷಗಳು ಅರಿತುಕೊಳ್ಳಬೇಕು ಎಂದು ಟಿ. ಈಶ್ವರ ಹೇಳಿದ್ದಾರೆ.