ರಾಮನಗರ:
ಪ್ರತ್ಯೇಕ ರಾಷ್ಟ್ರದ ಬಗ್ಗೆ ಸಂಸದ ಡಿ.ಕೆ.ಸುರೇಶ್ ಹೇಳಿಕೆ ಎಂಬ ವಿಚಾರಕ್ಕೆ ಸಂಬಂದಿಸಿದಂತೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕಲ್ಲು ಹೊಡೆಯುತ್ತಿದ್ದವರನ್ನು ಸಂಸದರನ್ನಾಗಿ ಮಾಡಿದರೆ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಟಾಂಗ್ ನೀಡಿದ್ದಾರೆ.
ಬಿಡದಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆಯ ದಿನ ಸಂಸದ ಡಿ.ಕೆ.ಸುರೇಶ್ ದೇಶ ವಿಭಜನೆ ಮಾತನಾಡಿದ್ದಾರೆ. ಕೇಂದ್ರ ಸರ್ಕಾರ ಆರ್ಥಿಕ ತಾರತಮ್ಯ, ಕರ್ನಾಟಕಕ್ಕೆ ಅನ್ಯಾಯ ಎಂಬ ಕಾರಣ ಕೊಟ್ಟಿದ್ದಾರೆ. ಇದು ಅಪಕ್ವ ಹೇಳಿಕೆ ಎಂದರು.
ಕರ್ನಾಟಕದಲ್ಲಿ ಬಿರಿಯಾನಿ ಊಟ ಮಾಡಿ ಭಾರತ್ ಜೋಡೋ ಮಾಡಿದ್ರು. ಈಗ ವಿಭಜನೆ ಮಾತನಾಡ್ತಿದ್ದಾರೆ. ಒಂದುವೇಳೆ ವಿಭಜನೆ ಆಯ್ತು ಅಂತ ತಿಳಿದುಕೊಳ್ಳಿ. ತಮಿಳುನಾಡಿನಿಂದ ಕಾವೇರಿ ವಿಚಾರದಲ್ಲಿ ನ್ಯಾಯ ಪಡೆಯಲು ಸಾಧ್ಯವೇ.
ಆಗ ದೇಶದಲ್ಲಿ ಆಹಾರದ ಕೊರತೆ ಇತ್ತು. ಆಗಿನಿಂದಲೂ ಸರ್ಕಾರಗಳು ಬಜೆಟ್ ಮಂಡಿಸಿಕೊಂಡು ಬಂದಿವೆ.
ನಾವು ಹಣಕಾಸು ಆಯೋಗಗಳನ್ನು ಮಾಡಿಕೊಂಡಿದ್ದೇವೆ. ಅವರು ಎಲ್ಲಾ ರಾಜ್ಯಕ್ಕೂ ಭೇಟಿಕೊಟ್ಟು ಪರಿಶೀಲನೆ ಮಾಡುತ್ತಾರೆ. ಯಾವ ರಾಜ್ಯಕ್ಕೆ ಎಷ್ಟು ಹಣಬೇಕು ಅನ್ನೋ ವರದಿ ಕೊಡುತ್ತಾರೆ.
ಯಾವ ರಾಜ್ಯ ಅಭಿವೃದ್ಧಿ ಆಗಿಲ್ಲ, ಯಾವ ರಾಜ್ಯ ಅಭಿವೃದ್ಧಿ ಆಗಿದೆ ಅದನ್ನ ನೋಡಿ ಹಣ ಹಂಚುತ್ತಾರೆ.
ಈ ಹಂಚಿಕೆಯನ್ನ ಕಾಂಗ್ರೆಸ್ ಇದ್ದಾಗಲೇ ಪ್ರಾರಂಭ ಮಾಡಿದ್ದು. ಮೋದಿ ಬಂದು ಇದನ್ನ ಪ್ರಾರಂಭ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಲ್ಲಿ ಕಲ್ಲು ಹೊಡೆಕೊಂಡು ಇದ್ದೋರನ್ನ ಲೋಕಸಭೆಗೆ ಕಳುಹಿಸಿದ್ರೆ ಇನ್ನೇನಾಗುತ್ತೆ.
ಇಲ್ಲಿ ಬಡ ಜನರನ್ನ ಲೂಟಿ ಮಾಡಿಕೊಂಡು ಸಾಕ್ಷಿಗುಡ್ಡೆ ಮಾಡಿದ್ದಾರೆ. ಅಂತವರನ್ನ ತೆಗೆದುಕೊಂಡು ಹೋಗಿ ದೇಶ ಕಟ್ಟು ಅಂತ ಕಳುಹಿಸಿದ್ರೆ ಕಟ್ತಾರಾ.?
ಅವರ ಸಾಮ್ರಾಜ್ಯ ಕಟ್ಟುಕೊಳ್ತಾರೆ ಅಷ್ಟೇ.
ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ಮುಂದೆ ನಮ್ಮ ಬೇಡಿಕೆಗಳನ್ನ ಸಂಘರ್ಷದಿಂದ ಪಡೆಯಲು ಸಾಧ್ಯವಿಲ್ಲ.
ವಾಸ್ತವವನ್ನ ಅವರಿಗೆ ಮನವರಿಕೆ ಮಾಡಬೇಕು.
ಅವರನ್ನ ಕನ್ವೀನ್ಸ್ ಮಾಡಿ ಹಣ ಪಡೆಯಬೇಕು.
ಅದನ್ನ ಬಿಟ್ಟು ಇವರ ಬಾಲಿಷ ಹೇಳಿಕೆಗಳಿಂದ ಸಮಸ್ಯೆ ಬಗೆಹರಿಯಲ್ಲ ಎಂದರು.