ಜಿಲ್ಲೆ

ಮುಸ್ಲಿಮರು ವಕ್ಫ್ ಆಸ್ತಿ ಅಂತಾರಲ್ಲ, ಅದು ಅವರಿಗೆ ಯಾರಿಂದ ಬಂದಿದ್ದು? ಸೌದಿಯ ಮುಲ್ಲಾಗಳು ಕೊಟ್ಟ ಆಸ್ತಿನಾ : ಪ್ರತಾಪ್ ಸಿಂಹ ಪ್ರಶ್ನೆ

ಮೈಸೂರು: ಕೇಂದ್ರ ಸರ್ಕಾರ ಕೂಡಲೇ ವಕ್ಫ್ ಕಾಯ್ದೆ ಹಾಗೂ ವಕ್ಫ್ ಬೋರ್ಡ್ ಅನ್ನು ರದ್ದುಪಡಿಸಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.

ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಸ್ಲಿಮರು ವಕ್ಫ್ ಆಸ್ತಿ ಅಂತಾರಲ್ಲ, ಅದು ಅವರಿಗೆ ಯಾರಿಂದ ಬಂದಿದ್ದು? ಅಕ್ಬರ್, ಔರಂಗಜೇಬ, ಜಿನ್ನಾ ಅಥವಾ ಯಾರಾದರೂ ಸೌದಿಯ ಮುಲ್ಲಾಗಳು ಕೊಟ್ಟ ಆಸ್ತಿನಾ ಇದು? ಪ್ರತ್ಯೇಕ ಆಸ್ತಿ ಮುಸ್ಲಿಮರಿಗೆ ಎಲ್ಲಿಂದ ಬಂತು? ಯಾರಿಂದ ಅವರಿಗೆ ಬಳುವಳಿಯಾಗಿ ಬಂದಿದ್ದು ಎಂದು ಪ್ರಶ್ನಿಸಿದರು.

ಹುಣಸೂರಿನ ಗಣೇಶ ದೇವಾಲಯದ 17 ಎಕರೆ ಜಾಗ ನಮ್ಮದು ಅಂತ ವಕ್ಫ್ ಬೋರ್ಡ್ ಹೇಳುತ್ತಿದೆ. ಚಿಕ್ಕಮಗಳೂರಿನಲ್ಲೂ ಇದೇ ಕತೆ. ಕಂಡವರ ಜಮೀನಿಗೆಲ್ಲ ಮುಲ್ಲಾಗಳು ನೋಟಿಸ್ ನೀಡುತ್ತಾ ಆ ಆಸ್ತಿ ನಮ್ಮದು ಅಂತ ಹೇಳುತ್ತಿದ್ದಾರೆ. ವಕ್ಫ್ ಬೋರ್ಡ್ ಜಮೀನಿನಲ್ಲಿ ಮುಸ್ಲಿಮರಿಗೆ ಉಳುಮೆ ಮಾಡಲು ಅವಕಾಶ ನೀಡಲಾಗಿದೆಯಾ? ನಮ್ಮ ದೇವಾಲಯ, ಮಠಗಳಲ್ಲಿ ಅನ್ನದಾನ ಮಾಡುವಂತೆ ಯಾವತ್ತಾದರೂ ಮಸೀದಿ, ಚರ್ಚ್‌ಗಳಲ್ಲಿ ಹಿಡಿ ಅನ್ನ ಯಾರಿಗಾದರೂ ಹಾಕಿದ್ದಿರಾ ಎಂದು ಆಕ್ರೋಶ ಹೊರಹಾಕಿದರು.