ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರಿಗೆ ಮಹಿಳೆಯರು 24 ಸಾವಿರ ರೂ. ಠೇವಣಿ ನೀಡಿದರು. ಗೂಳಿಹಟ್ಟಿ ಶೇಖರ್, ಮಹಾಲಿಂಗ ಶಾಸ್ತ್ರಿ, ಇ.ವಿಶ್ವಾಸ್, ಸುವರ್ಣಾ ಶಂಕರ್, ಆರತಿ ಆ.ಮ.ಪ್ರಕಾಶ್, ಆಶಾ ಚನ್ನಬಸಪ್ಪ, ಶಂಕರ್‌ಗನ್ನಿ, ಚನ್ನಬಸಪ್ಪ ಮತ್ತಿತರರಿದ್ದರು. 
ಜಿಲ್ಲೆ

ಮೋದಿ ಫೋಟೊ ಬಳಕೆ ವಿರೋಧಿಸಲು ಇವರು ಯಾರು?

ಶಿವಮೊಗ್ಗ: ನಾನು ಪ್ರಧಾನಿ ನರೇಂದ್ರ ಮೋದಿ ವಿಶ್ವನಾಯಕ. ಅವರ ಫೋಟೋ ಹಾಕಬಾರದೆಂದು ಹೇಳಲು ಇವರು ಯಾರು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು.

ಮಾಜಿ ಸಿಎಂ ಬಿ.ಎಸ್‌ಯಡಿಯೂರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಫೋಟೋ ಇಟ್ಟುಕೊಂಡು ಹೋಗಿ ಚುನಾವಣೆಯಲ್ಲಿ ಗೆಲ್ಲಲಿ ನೋಡೋಣ ಎಂದು ಸವಾಲು ಹಾಕಿದರು. ಅವರ ಫೋಟೋ ಹಾಕಬಾರದೆಂದು ಹೇಳಲು ಇವರು ಯಾರು ಎಂದು ಪ್ರಶ್ನಿಸಿದರು.
ನಾಮಪತ್ರದ ಸಲ್ಲಿಸುವ ಠೇವಣಿ ಹಣವನ್ನು ನಗರದ ಮಹಿಳೆಯರು ಮತ್ತು ಮುತ್ತೈದೆಯರು ಸೇರಿ 24 ಸಾವಿರ ರೂ. ಮತ್ತು ತೀರ್ಥಹಳ್ಳಿಯ ಭೀಮನಕಟ್ಟೆ ಮಠದ ಶ್ರೀಗಳು 1 ಸಾವಿರ ರೂ. ನೀಡಿದ್ದು, ನನ್ನ ಗೆಲುವಿಗೆ ಈ ನೆಲದ ಶ್ರೇಷ್ಠರಾದ ಸಾಧು ಸಂತರು ಮತ್ತು ತಾಯಂದಿರುವ ಹರಸಿ ಒಟ್ಟು 25 ಸಾವಿರ ರೂ. ನೀಡಿದ್ದಾರೆ. ಇದು ನನ್ನ ಗೆಲುವಿನ ಸಂಕೇತ ಎಂದು ಹೇಳಿದರು.