ರಾಣೆಬೆನ್ನೂರ: ಪತ್ನಿ ಮೃತಪಟ್ಟಿರುವುದನ್ನು ಮನಸ್ಸಿಗೆ ಹಚ್ಚಿಕೊಂಡು ಪತಿ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಣಕೂರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಫಕ್ಕೀರಪ್ಪ ಲಕ್ಷ$್ಮಪ್ಪ ಓಲೇಕಾರ (28) ಮೃತ ವ್ಯಕ್ತಿ.
ಈತ ತನ್ನ ಪತ್ನಿ ಮೃತಪಟ್ಟಿದ್ದನ್ನು ಮನಸ್ಸಿಗೆ ಹಚ್ಚಿಕೊಂಡು ನಿತ್ಯವೂ ಸರಾಯಿ ಕುಡಿಯುವ ಚಟಕ್ಕೆ ಅಂಟಿಕೊಂಡಿದ್ದು ಆಕೆಯ ಸಾವಿನ ನೆನಪಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.