ಘಟನಾ ಸ್ಥಳದಲ್ಲಿ ಪೊಲೀಸರಿಂದ ಪರಿಶೀಲನೆ  
ಜಿಲ್ಲೆ

ಗಂಡನನ್ನು ಕೊಂದು ಗುಂಡಿ ತೋಡಿ ಮುಚ್ಚಿದ ಪತ್ನಿ; ಬಳಿಕ ಮೊಬೈಲ್​ಫೋನ್​ ಸ್ವಿಚ್ಡ್​ ಆಫ್ ಮಾಡಿ ಪರಾರಿ

rashmirhebbur

ಬೆಂಗಳೂರು: ಇದೊಂದು ಪಕ್ಕಾ 'ಗಂಡಾಗುಂಡಿ' ಕೇಸ್​. ಮಹಿಳೆಯೊಬ್ಬಳು ಗಂಡನನ್ನು ಕೊಲೆ ಮಾಡಿದ್ದಲ್ಲದೆ ಗುಂಡಿ ತೋಡಿ ಶವ ಹೂತಿಟ್ಟು ಪರಾರಿಯಾಗಿದ್ದಾಳೆ. ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿ ಇಂಥದ್ದೊಂದು ಕೊಲೆ ನಡೆದಿದೆ.

ಬೆಂಗಳೂರಿನ ಕಿತ್ತಗನೂರು ಸಮೀಪದ ಹಳೇಹಳ್ಳಿಯಲ್ಲಿ ಈ ಕೊಲೆ ನಡೆದಿದೆ. ಪ್ರೇಮ್ ಬದ್ವಾಲ್ ಎಂಬಾತ ಕೊಲೆಗೀಡಾದ ಪತಿ. ಪತ್ನಿ ಶೋಭಾ ಬದ್ವಾಲ್​ ಕೊಲೆ ಆರೋಪಿ. ಈಕೆ ಗಂಡನನ್ನು ಕೊಂದು ಗುಂಡಿ ತೋಡಿ ಮುಚ್ಚಿ ಮೊಬೈಲ್​ಫೋನ್​ ಸ್ವಿಚ್ಡ್​ ಆಫ್​ ಮಾಡಿ ಪರಾರಿಯಾಗಿದ್ದಳು.

ಕಳೆದ ವಾರ ಕೊಲೆ ಮಾಡಿರಬಹುದು ಎಂದು ಅಂದಾಜಿಸಲಾಗಿದೆ. ನಿನ್ನೆ ರಾತ್ರಿ ವಾಸನೆ ಬರುತ್ತಿದ್ದಂತೆ ಸ್ಥಳೀಯರು ಆವಲಹಳ್ಳಿ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಶವ ಪತ್ತೆಯಾಗಿದೆ.

ಪತಿ-ಪತ್ನಿ ಮಧ್ಯೆ ಯಾವುದೋ ವಿಚಾರಕ್ಕೆ ಗಲಾಟೆ ಆಗಿರುವ ಸಾಧ್ಯತೆ ಇದ್ದು, ಬಳಿಕ ಆಕೆ ಕೊಲೆ ಮಾಡಿ ಹೂತು ಹಾಕಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇವರಿಬ್ಬರೂ ನೇಪಾಳ ಮೂಲದವರಾಗಿದ್ದು, ಕೂಲಿ ಕೆಲಸ ಮಾಡುತ್ತಿದ್ದರು ಎಂಬುದು ತಿಳಿದು ಬಂದಿದೆ. ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ.