ವಿಜಯಪುರ: ಪಟ್ಟಣದ ವಿಜಯನಗರ ಬಡಾವಣೆಯಲ್ಲಿ ಮಂಗಳವಾರ ದಂಪತಿ ನಡುವಿನ ಕಲಹ ಪತಿ ಹಾಗೂ ಪತ್ನಿ ಸಾವಿನಲ್ಲಿ ಅಂತ್ಯವಾಗಿದೆ. ವೆಲ್ಡಿಂಗ್ ಶಾಪ್ ಮಾಲೀಕ ಬಸವಾಚಾರಿ (46) ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿ ಸುಮಾ (38) ಹತ್ಯೆಯಾಗಿದೆ. ದಂಪತಿ ನಡುವಿನ ಜಗಳ ವಿಕೋಪಕ್ಕೆ ಹೋದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಪತಿ ಕಬ್ಬಿಣದ ಡಂಬಲ್ಸ್ನಿಂದ ಹಲ್ಲೆ ಮಾಡಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ, ನಂತರ ಮನೆಯಲ್ಲಿ ್ಯಾನ್ಗೆ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು, ಒಬ್ಬ ಮಗ ಮನೆಗೆ ಬಂದಾಗ ತಾಯಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಸಂಬಂಧಿಕರಿಗೆ ಮಾಹಿತಿ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೂ ಮುನ್ನ ಪತಿ ಡೆತ್ನೋಟ್ ಬರೆದಿಟ್ಟಿದ್ದು ಪೊಲೀಸ್ ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಎಸ್ಪಿ ಸಿ.ಕೆ.ಬಾಬಾ, ಡಿವೈಎಸ್ಪಿ ರವಿ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.