ಸರಗೂರು ತಾಲೂಕಿನ ಚಿಕ್ಕದೇವಮ್ಮ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. 
ಜಿಲ್ಲೆ

ಚಿಕ್ಕದೇವಮ್ಮನ ಬೆಟ್ಟದಲ್ಲಿ ಕಾಳ್ಗಿಚ್ಚು

ಲೋಕೇಶ್ ಮನು. ಡಿ

ಸರಗೂರು: ತಾಲೂಕಿನ ಚಿಕ್ಕದೇವಮ್ಮ ಬೆಟ್ಟದಲ್ಲಿ ಬುಧವಾರ ಮಧ್ಯಾಹ್ನ ಸುಮಾರು 2ರಿಂದ 3 ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದ್ದು, ಅರಣ್ಯ ಇಲಾಖೆ ಹಾಗೂ ಆಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು.

ಕಿಡಿಗೇಡಿಗಳು ಬೆಂಕಿ ಹಚ್ಚಿರಬಹುದು ಎಂದು ಶಂಕಿಸಲಾಗಿದ್ದು, ಬೆಂಕಿಯ ಕೆನ್ನಾಲಗೆ ವೇಗವಾಗಿ ವ್ಯಾಪಿಸುತ್ತಿದ್ದು, ಬೆಟ್ಟದ ಸುತ್ತ ದಟ್ಟ ಹೊಗೆ ಆವರಿಸಿದೆ. ಬೆಂಕಿ ನಂದಿಸುವ ಕಾರ್ಯ ಮುಂದುವರಿದ್ದು, ಶೀಘ್ರ ತಹಬದಿಗೆ ಬರಲಿದೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.

ಬೆಟ್ಟದ ಬಳಿ ಹೂವಿನಕೊಳ ಗ್ರಾಮದಿಂದ ಜಮೀನು ಕಡೆಯಿಂದ ಬೆಂಕಿ ಆವರಿಸಿತು ಎನ್ನಲಾಗಿದೆ. ಬೀಡಿ, ಸಿಗರೇಟು ಸೇದುವವರು ಬೆಂಕಿ ಕಡ್ಡಿ ಗೀರಿ ಬಿಸಾಡಿದ್ದರಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆಯಿದೆ ಎಂದು ಅರಣ್ಯ ಇಲಾಖೆ ಅಧಿಕಾರಿ ವಲಯಧಿಕಾರಿ ಹನುಮಂತರಾಜು ತಿಳಿಸಿದ್ದಾರೆ.

ಪೋಟೋ ಕ್ಯಾಪ್ಸನ್.