ಕೆ.ಎಂ.ದೊಡ್ಡಿ ಸಮೀಪದ ಬಿದರಹಳ್ಳಿ, ಯಲಾದಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಕಾರ್ಯಕರ್ತರನ್ನು ಶಾಸಕ ಕದಲೂರು ಉದಯ್ ಸ್ವಾಗತಿಸಿದರು. ಎ.ಎಸ್.ರಾಜೀವ್, ಸಿದ್ದರಾಜು, ನಿಂಗೇಗೌಡ ಇತರರು ಇದ್ದರು. 
ಜಿಲ್ಲೆ

ಹೆಚ್ಚಿನ ಮತಗಳಿಂದ ಸ್ಟಾರ್ ಚಂದ್ರು ಗೆಲ್ಲಿಸಿ

ನಾಗೇಶ ಎಸ್

ಕೆ.ಎಂ.ದೊಡ್ಡಿ: ಮಂಡ್ಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ( ಸ್ಟಾರ್ ಚಂದ್ರು) ಅವರಿಗೆ ಮದ್ದೂರು ಕ್ಷೇತ್ರದಿಂದ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸಬೇಕು ಎಂದು ಶಾಸಕ ಕದಲೂರು ಉದಯ್ ಮನವಿ ಮಾಡಿದರು.

ಸಮೀಪದ ಬಿದರಹಳ್ಳಿ, ಯಲಾದಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಕಾರ್ಯಕರ್ತರನ್ನು ಬರಮಾಡಿಕೊಂಡ ಮಾತನಾಡಿದರು.

ರಾಜ್ಯಾದ್ಯಂತ ಕಾಂಗ್ರೆಸ್ ಅಲೆ ಎದ್ದಿದ್ದು, ಹೆಚ್ಚಿನ ಸ್ಥಾನ ಗಳಿಸುವುದು ನಿಶ್ಚಿತವಾಗಿದೆ. ಕಾಂಗ್ರೆಸ್ ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ರಾಜ್ಯದ ಕಲ್ಯಾಣಕ್ಕಾಗಿ ನೀಡಿದ್ದ 5 ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿದೆ. ದೇಶದ ಯಾವುದೇ ರಾಜ್ಯ ಸರ್ಕಾರ ಮಾಡದ ಜನಕಲ್ಯಾಣವನ್ನು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಮಾಡುತ್ತಿದೆ. ಮಂಡ್ಯದ ಅಭಿವೃದ್ಧಿಗೆ ಜೆಡಿಎಸ್ ಹಾಗೂ ಬಿಜೆಪಿ ಕೊಡುಗೆ ಶೂನ್ಯವಾಗಿದ್ದು, ಮಂಡ್ಯ ಜನರ ಹಾಗೂ ರೈತರ ಹಿತಕಾಯಲು ಈಗಾಗಲೇ ಸರ್ಕಾರ ಒಂದು ಕೋಟಿ ರೂ.ಗೂ ಹೆಚ್ಚಿನ ಅನುದಾನ ನೀಡಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಸ್ವಾಭಿಮಾನದ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಹೆಚ್ಚಿನ ಮತಗಳಲ್ಲಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಜಿಪಂ ಮಾಜಿ ಸದಸ್ಯ ಎ.ಎಸ್.ರಾಜೀವ್, ಗ್ರಾಪಂ ಅಧ್ಯಕ್ಷ ಸಿದ್ದರಾಜು, ಮಾಜಿ ಅಧ್ಯಕ್ಷ ನಿಂಗೇಗೌಡ, ಸದಸ್ಯ ಅಭಿ, ಸುನೀಲ್, ಗಿರೀಶ್, ಮುಖಂಡರಾದ ನಾಡಗೌಡ ಹನುಮೇಶ್, ನಂಜಯ್ಯ, ಚೌಡೇಗೌಡ, ದೇವರಾಜು, ಬೋರೇಗೌಡ, ನಿಂಗಯ್ಯ, ಸಿದ್ದರಾಜು, ಮಧು, ಸಾಗರ ಇತರರು ಇದ್ದರು.