ಮಂಗಳೂರು : ವಿಧಾನ ಪರಿಷತ್‌ಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪ ಚುನಾವಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅ.19ರಂದು ಸಾಯಂಕಾಲ 4ರಿಂದ .21ರಂದು ಸಾಯಂಕಾಲ 6ರವರೆಗೆ ಹಾಗೂ ಮತ ಎಣಿಕೆ ದಿನವಾದ ಅ.24ರಂದು ಬೆಳಗ್ಗೆ 6ರಿಂದ ಸಾಯಂಕಾಲ 6ರವರೆಗೆ ಎಲ್ಲ ವಿಧದ ಮದ್ಯದಂಗಡಿಗಳನ್ನು ಮಚ್ಚುವಂತೆ ಹಾಗೂ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶ ಹೊರಡಿಸಿದ್ದಾರೆ.