ಮಾಂಜರಿ: ಪ್ರಾಮಾಣಿಕತೆ ಮತ್ತು ಸತತ ಪರಿಶ್ರಮದಿಂದ ವಿದ್ಯಾರ್ಥಿಗಳು ಗುರಿ ತಲುಪಲು ಸಾಧ್ಯ ಎಂದು ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಯದ ಶಿಕ್ಷಕ ಎ.ಎಸ್.ಪಾಟೀಲ ಹೇಳಿದರು.
ತಾಲೂಕಿನ ಅಂಕಲಿ ಗ್ರಾಮದ ಶಿವಾಲಯದ ಅನುಭವ ಮಂಟಪದಲ್ಲಿ ಕೆಎಲ್‌ಇ ಸಂಸ್ಥೆಯ ಶ್ರೀಮತಿ ಶಾರದಾ ಕೋರೆ ಪ್ರೌಢ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಾರ್ಷಿಕ ಸ್ನೇಹ ಸಮ್ಮೇಳನ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನುಉದ್ದೇಶಿಸಿ ಮಾತನಾಡಿ, ಕ್ರೀಡೆ ವಿದ್ಯಾರ್ಥಿಗಳನ್ನು ಸದಢ ಹಾಗೂ ಮಾನಸಿಕವಾಗಿ ಸಶಸ್ತರನ್ನಾಗಿಸುತ್ತದೆ ಎಂದರು.
ಡಾ.ಆರ್.ಡಿ.ಗಿಜರೆ ಮಾತನಾಡಿ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರ ಬಗ್ಗೆ ಮಾರ್ಗದರ್ಶನ ನೀಡಿದರು. ಶಿಕ್ಷಕ ಎಸ್.ಬಿ.ಕುಂಬಾರ ಪರಿಚಯಿಸಿದರು. ಒಕ್ಕೂಟದ ಅಧ್ಯಕ್ಷ ಕೆ.ಬಿ.ಶಿಂಧೆ, ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ವಿ.ಡಿ.ನಾಯಿಕ ವರದಿ ಮಂಡಿಸಿದರು. ಎ.ಎಸ್.ಮಾನೆ ಬಹುಮಾನ ವಿತರಣೆ ನಡೆಸಿಕೊಟ್ಟರು. ಡಿ.ಎಸ್.ಬಾಕಳೆ ನಿರೂಪಿಸಿದರು. ಎ.ಡಿ.ಜಾಧವ ವಂದಿಸಿದರು.