ರಾಜ್ಯ ಈರುಳ್ಳಿ ಬೆಳೆಗಾರರ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಕೆ.ಶರಣಮ್ಮಗೆ ಶುಕ್ರವಾರ ಮನವಿ ಸಲ್ಲಿಸಿದರು. ಸಂಘದ ರಾಜ್ಯಾಧ್ಯಕ್ಷ ಅಧ್ಯಕ್ಷ ಎನ್.ಎಂ.ಸಿದ್ದೇಶ, ಜಿಲ್ಲಾಧ್ಯಕ್ಷ ಅರ್ತಿ ಪ್ರಕಾಶ್, ತಾಲೂಕು ಅಧ್ಯಕ್ಷ ಸುರೇಶ ಮಲ್ಕಿಒಡೆಯರ್ ಇತರರಿದ್ದರು. 
ಜಿಲ್ಲೆ

ಈರುಳ್ಳಿ ರಫ್ತಿನ ತೆರಿಗೆ ಆದೇಶ ಹಿಂಪಡೆಯಿರಿ

Gangavati - Desk - Veeresh S Ullagaddi

ಹೂವಿನಹಡಗಲಿ: ಈರುಳ್ಳಿ ರಫ್ತಿನ ಮೇಲೆ ಶೇ. 40ರಷ್ಟು ತೆರಿಗೆ ವಿಧಿಸಿರುವ ಕೇಂದ್ರ ಸರ್ಕಾರದ ಕ್ರಮ ಸರಿಯಲ್ಲ. ಕೂಡಲೇ ಈ ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿ ರಾಜ್ಯ ಈರುಳ್ಳಿ ಬೆಳೆಗಾರರ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಕೆ.ಶರಣಮ್ಮಗೆ ಮನವಿ ಸಲ್ಲಿಸಿದರು.


ಸಂಘದ ರಾಜ್ಯಾಧ್ಯಕ್ಷ ಎನ್.ಎಂ.ಸಿದ್ದೇಶ ಮಾತನಾಡಿ, ಕೊಳೆರೋಗದಿಂದ ಈರುಳ್ಳಿ ಇಳುವರಿಯಲ್ಲಿ ಗಣನೀಯ ಕುಸಿತ ಕಾಣುತ್ತಿದೆ.

ಇಂತಹ ಸಂದಿಗ್ದ ಸ್ಥಿತಿಯಲ್ಲಿ ಈರುಳ್ಳಿ ರಫ್ತಿನ ಮೇಲೆ ಕೇಂದ್ರ ಸರ್ಕಾರ ಶೇ. 40ರಷ್ಟು ತೆರಿಗೆ ವಿಧಿಸಿರುವುದರಿಂದ ಮಾರುಕಟ್ಟೆಯಲ್ಲಿ ಸ್ಥಿರ ಬೆಲೆ ದೊರೆಯದೇ ರೈತರು ಸಂಕಷ್ಟ ಎದುರಿಸಬೇಕಾಗುತ್ತದೆ. ಕೂಡಲೇ ಸರ್ಕಾರ ಹೆಚ್ಚುವರಿ ತೆರಿಗೆ ವಿಧಿಸುವ ತೀರ್ಮಾನ ಕೈಬಿಡಬೇಕೆಂದು ಆಗ್ರಹಿಸಿದರು.


ಮಳೆ ಕೊರತೆಯಿಂದ ಬೆಳೆಗಳೆಲ್ಲ ಹಾನಿಗೀಡಾಗಿದ್ದು, ಸರ್ಕಾರ ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು. ರಾಜ್ಯದಲ್ಲಿ ಈರುಳ್ಳಿ ಖರೀದಿ ಕೇಂದ್ರ ತೆರೆದು ಬೆಳೆಗಾರರನ್ನು ಪ್ರೋತ್ಸಾಹಿಸಬೇಕೆಂದು ಒತ್ತಾಯಿಸಿದರು.

ಸಂಘದ ಜಿಲ್ಲಾಧ್ಯಕ್ಷ ಅರ್ತಿ ಪ್ರಕಾಶ್, ತಾಲೂಕು ಅಧ್ಯಕ್ಷ ಸುರೇಶ ಮಲ್ಕಿಒಡೆಯರ್, ಜಿಲ್ಲಾ ವಕ್ತಾರ ಬಿ.ಎಂ.ವೀರಯ್ಯಸ್ವಾಮಿ, ಕಾರ್ಯದರ್ಶಿ ಎಚ್.ಭದ್ರಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೊಟ್ರೇಶ್ ಇದ್ದರು.