ಜಿಲ್ಲೆ

ಹೆಲ್ಮೆಟ್ ಧರಿಸದಿದ್ದರೆ ದಂಡ

ಲಲಾಟಾಕ್ಷ ಎಸ್

ಗುಂಡ್ಲುಪೇಟೆ: ಸಾರ್ವಜನಿಕರ ಜೀವ ರಕ್ಷಣೆ ಸಲುವಾಗಿ ಸರ್ಕಾರ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಿದ್ದು ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರಿಗೆ ದಂಡ ವಿಧಿಸಲಾಗುವುದು ಎಂದು ತೆರಕಣಾಂಬಿ ಪೊಲೀಸ್ ಠಾಣೆ ಸಬ್‌ಇನ್‌ಸ್ಪೆಕ್ಟರ್ ಮಹೇಶ್ ಹೇಳಿದರು.


ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ಮಂಗಳವಾರ ಹೆಲ್ಮೆಟ್ ಧರಿಸದೆ ಪ್ರಯಾಣ ಮಾಡುತ್ತಿದ್ದ ಬೈಕ್ ಸವಾರರಿಗೆ ಜಾಗೃತಿ ಮೂಡಿಸಿ ಮಾತನಾಡಿದ ಅವರು, ಹೆಲ್ಮೆಟ್ ಜೀವರಕ್ಷಕವಾಗಿದ್ದರೂ ದ್ವಿಚಕ್ರ ವಾಹನ ಸವಾರರು ಬಳಕೆಗೆ ಆದ್ಯತೆ ನೀಡುತ್ತಿಲ್ಲ. ಯುವ ಜನತೆ ಹೆಲ್ಮೆಟ್ ಇದ್ದರೂ ಧರಿಸದೆ ಬೈಕ್ ಚಾಲನೆ ಮಾಡುತ್ತಿರುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದರಿಂದ ಅಪಘಾತಗಳು ಸಂಭವಿಸಿದಾಗ ಮೊದಲು ತಲೆಗೆ ಪೆಟ್ಟು ಬೀಳುವುದರಿಂದ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಎಲ್ಲರೂ ಸಂಚಾರಿ ನಿಯಮ ಪಾಲಿಸಿ ಜೀವ ಉಳಿಸಿಕೊಳ್ಳುವ ಜತೆಗೆ ಮೊದಲು ಹೆಲ್ಮೆಟ್ ಧರಿಸುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದು ತಿಳಿಸಿದರು.


ಅಪರಾಧ ವಿಭಾಗದ ಸಬ್‌ಇನ್‌ಸ್ಪೆಕ್ಟರ್ ಕೂಸಪ್ಪ, ಸಹಾಯಕ ಸಬ್‌ಇನ್‌ಸ್ಪೆಕ್ಟರ್ ಮಹೇಶ್, ಸಿಬ್ಬಂದಿ ಸೀನನಾಯ್ಕ, ಭಗೀರಥ, ಮಹೇಶ್ ಇದ್ದರು.