ಜಿಲ್ಲೆ

ಬೆಳಗಾವಿಯಲ್ಲಿ ಆಸ್ತಿಗಾಗಿ‌ ಮಹಿಳೆಯ ಭೀಕರ ಹತ್ಯೆ!

ಮಂಜುನಾಥ ಕೋಳಿಗುಡ್ಡ

ಬೆಳಗಾವಿ : ಇಲ್ಲಿನ ಟಿಳಕವಾಡಿಯಲ್ಲಿ ಆಸ್ತಿ ವಿಚಾರಕ್ಕೆ ಮಹಿಳೆ ಭೀಕರವಾಗಿ ಕೊಲೆಗೈದಿರುವ ಘಟನೆ ಬುಧವಾರ ನಡೆದಿದೆ.

ತೀವ್ರವಾಗಿ ಗಾಯಗೊಂಡಿದ್ದ ಗೀತಾ ಜಿ.(45) ಬಿಮ್ಸ್ ಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಗೀತಾ ಪತಿ ರಂಜಿತ್ ಗವಳಿ ಹಲವು ವರ್ಷಗಳ ಹಿಂದೆ ಮೃತಪಟ್ಟಿದ್ದಾನೆ. ಪತಿಗೆ ಸೇರಿದ 40*12 ಜಾಗಕ್ಕಾಗಿ ಜಗಳ ಮಾಡಿ ಗಣೇಶ ಚಾಕು ಇರಿದು ಪರಾರಿಯಾಗಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಟಿಳಕವಾಡಿ ಠಾಣೆ ಪೊಲೀಸರು ತಿಳಿಸಿದ್ದಾರೆ.