ಬ್ಯಾಡಗಿ: ಮಹಿಳೆ ಸ್ನಾನ ಮಾಡುವುದನ್ನು ವೀಡಿಯೊ ಮಾಡಿಕೊಂಡ ಭೂಪ ಮೊಬೈಲ್ನೊಂದಿಗೆ ಪರಾರಿಯಾಗಿದ ಘಟನೆ ತಾಲೂಕಿನ ಬೆಳಕೇರಿ ಗ್ರಾಮದಲ್ಲಿ ನಡೆದಿದೆ.
ಶಿವರಾಜ ರಾಮಪ್ಪ ತೆವರಿ (21) ಪರಾರಿಯಾದ ಆರೋಪಿ.
ಈತ ಮಹಿಳೆಯೊಬ್ಬರು ಸ್ನಾನದ ಗೃಹದಲ್ಲಿ ಸ್ನಾನ ಮಾಡುವಾಗ ಮೊಬೈಲ್ ಇಟ್ಟು ವೀಡಿಯೊ ರೇಕಾರ್ಡ್ ಮಾಡಿಕೊಂಡಿದ್ದಾನೆ. ಅಲ್ಲದೆ ಮಹಿಳೆ ಹೊರ ಬರುತ್ತಿದ್ದಂತೆ ಮೊಬೈಲ್ ತೆಗೆದುಕೊಂಡು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.