ಜಿಲ್ಲೆ

ಮನನೊಂದು ವೃದ್ಧೆ ಆತ್ಮಹತ್ಯೆ

ಇಂದಿರಾ ಎನ್ ಕೆ

ಕುಂದಾಪುರ: ದೀರ್ಘ ಅನಾರೋಗ್ಯದಿಂದಿದ್ದ ಕುಂದಾಪುರ ತಾಲೂಕಿನ ಬಸ್ರೂರು ಗ್ರಾಮದ ಕಲ್ಯಾಣಿ (82) ಎಂಬುವರು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಪರೀತ ಹೊಟ್ಟೆ ನೋವು ಹಾಗೂ ಬೆನ್ನುನೋವಿನಿಂದ ಬಳಲುತ್ತಿದ್ದರಿಂದ ಅವರು ವೆಂಕಟರಮಣ ದೇವಸ್ಥಾನದ ಹಿಂಬದಿಯ ದೇವರಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.