ಜಿಲ್ಲೆ

ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

Gadag - Desk - Tippanna Avadoot

ರಾಣೆಬೆನ್ನೂರ: ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ಬೀರೇಶ್ವರ ನಗರದಲ್ಲಿ ಭಾನುವಾರ ಸಂಭವಿಸಿದೆ.

ರೇಣುಕಾ ಫಕೀರಪ್ಪ ಚೌಡಣ್ಣನವರ (45) ಮೃತ ಮಹಿಳೆ. ಇವರು ಬೆನ್ನು ನೋವಿನಿಂದ ಬಳಲುತ್ತಿದ್ದರು.

ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.