ಜಿಲ್ಲೆ

ಕೋತಿ ದಾಳಿಗೆ ಮಹಿಳೆ ಗಾಯ

ಮೇಲುಕೋಟೆ: ಇಲ್ಲಿನ ಯೋಗಾನರಸಿಂಹಸ್ವಾಮಿ ಬೆಟ್ಟದ ದೇವಾಲಯದಲ್ಲಿ ಮಂಗಳವಾರ ಕೋತಿ ದಾಳಿಯಿಂದಾಗಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.

ಸದ್ಯ ಗಾಯಗೊಂಡ ಮಹಿಳೆ ಮಾಹಿತಿ ಲಭ್ಯವಾಗಿಲ್ಲ. ಈ ಹಿಂದೆ ಇದೇ ರೀತಿಯ ಪ್ರಕರಣ ನಡೆದಿದ್ದು, ಕಡಿವಾಣ ಹಾಕದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಕೋತಿ ಹಾವಳಿಗೆ ಕಡಿವಾಣ ಹಾಕದಿದ್ದರೆ ಮೇಲುಕೋಟೆಗೆ ಕೆಟ್ಟಹೆಸರು ಬರುತ್ತದೆ. ಮೇಲಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಕ್ರಮವಹಿಸದಿದ್ದರೆ ಚೆಲುವನಾರಾಯಣಸ್ವಾಮಿ ದೇವಾಲಯದ ಕಚೇರಿ, ಗ್ರಾಮ ಪಂಚಾಯಿತಿ ಕಚೇರಿ ಹಾಗೂ ಅರಣ್ಯ ಇಲಾಖೆಯ ಮುಂದೆ ಪ್ರತಿಭಟನೆ ನಡೆಸುವುದಾಗಿ ಸಾರ್ವಜನಿಕರು ಎಚ್ಚರಿಸಿದ್ದಾರೆ.