ಜಿಲ್ಲೆ

ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿಯಾಗಿ ಮಹಿಳೆ ಸಾವು

ತುಮಕೂರು ಡೆಸ್ಕ್

ಚಿಕ್ಕನಾಯಕನಹಳ್ಳಿ: ಪಟ್ಟಣದ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಬುಧವಾರ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಕಸಬಾ ಹೋಬಳಿಯ ರಾಯಪ್ಪನ ಪಾಳ್ಯ ಗ್ರಾಮದ ಗಂಗಮ್ಮ(50)ಮೃತೆ. ಡಿಕ್ಕಿ ಹೊಡೆದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ. ಕೆಲವು ತಿಂಗಳ ಹಿಂದೆ ಪತಿ ಮೃತರಾಗಿದ್ದರು. ಚಿಕ್ಕನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.