ಜಿಲ್ಲೆ

ಬಿಬಿಎಂಪಿ ಕಸದ ಲಾರಿಯಲ್ಲಿತ್ತು ಮಹಿಳೆ ಶವ: ಪ್ರಿಯಕರನನ್ನು ವಶಕ್ಕೆ ಪಡೆದ ಪೊಲೀಸರು! BBMP Garbage Truck

BBMP Garbage Truck : ಚನ್ನಮ್ಮನಕೆರೆ ಅಚ್ಚಕಟ್ಟು ಪ್ರದೇಶದಲ್ಲಿ ಮಹಿಳೆಯನ್ನು ಉಸಿರುಗಟ್ಟಿಸಿ ಹತ್ಯೆಗೈದ ಬಳಿಕ ಶವವನ್ನು ಮೂಟೆ ಕಟ್ಟಿ ಬಿಬಿಎಂಪಿ ಕಸದ ಲಾರಿಯಲ್ಲಿ ಎಸೆದುಹೋಗಿದ್ದು, ಕೊಲೆ ಮಾಡಿರುವ ಅನುಮಾನದ ಮೇಲೆ ಪ್ರಿಯಯಕ ಶಂಶುದ್ದೀನ್​ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೃತ ಮಹಿಳೆಯನ್ನು ಬನ್ನೇರುಘಟ್ಟ ರಸ್ತೆ ಹುಳಿಮಾವು ನಿವಾಸಿ ಪುಷ್ಪಾ ಎಂದು ಗುರುತಿಸಲಾಗಿದೆ. ಇಬ್ಬರ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. ಆರೋಪಿ ಆಟೋ ಚಾಲಕನೆಂಬ ಸುಳಿವು ಪೊಲೀಸರಿಗೆ ಲಭ್ಯವಾಗಿತ್ತು. ಈ ಕುರಿತು ತನಿಖೆ ಚುರುಕುಗೊಳಿಸಿರುವ ಅಧಿಕಾರಿಗಳು ಶಂಶುದ್ದೀನ್​ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಮಹಿಳೆಯನ್ನು ಬೇರೆ ಕಡೆ ಹತ್ಯೆಗೈದು ತಾನೆ ಆಟೋದಲ್ಲಿ ಶವ ತಂದು ಬಿಬಿಎಂಪಿ ಕಸದ ಲಾರಿಯಲ್ಲಿ ಎಸೆದು ಹೋಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಜೂ.28ರ ತಡರಾತ್ರಿ ಸ್ಥಳೀಯ ನಿವಾಸಿಯೊಬ್ಬರು ಕಸ ಹಾಕಲು ಹೋಗಿದ್ದ ವೇಳೆ ಲಾರಿಯಲ್ಲಿ ಮಹಿಳೆಯ ಕೂದಲು ಕಾಣಿಸಿತ್ತು. ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ದೌಡಾಯಿಸಿದ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಮತ್ತು ಚೆನ್ನಮ್ಮನ ಅಚ್ಚುಕಟ್ಟು ಪೊಲೀಸರು ಶವವನ್ನು ಹೊರತೆಗೆದು ಪರಿಶೀಲನೆ ನಡೆಸಿದ್ದರು. ಮಹಿಳೆ ದೇಹದ ಮೇಲೆ ಯಾವುದೆ ಗುರುತುಗಳು ಪತ್ತೆಯಾಗಿರಲಿಲ್ಲ. ಮಹಿಳೆಯನ್ನು ಉಸಿರುಗಟ್ಟಿಸಿ ಹತ್ಯೆಗೈದು ಮೂಟೆಕಟ್ಟೆ ಕಸದ ಲಾರಿಗೆ ಎಸೆದು ಹೋಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದರು. ಘಟನಾ ಸ್ಥಳಕ್ಕೆ ಶ್ವಾನ ದಳ, ಬೆಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಲಿವಿಂಗ್​ ಟುಗೆದರ್​

ಪುಷ್ಪಾ ಅನ್ಯ ಕೋಮಿನ ಶಂಶುದ್ದೀನ್​ ಜತೆ ಲಿವಿಂಗ್​ ಟುಗೆದರ್​ನಲ್ಲಿದ್ದಳು. ಕುಟುಂಬಸ್ಥರ ವಿರೋಧವಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಪುಷ್ಪ ಜತೆ ಸಂಪರ್ಕದಲ್ಲಿ ಇರಲಿಲ್ಲ. ಇಬ್ಬರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಪ್ರಿಕರನೇ ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ.