ಜಿಲ್ಲೆ

ಮಹಿಳೆಯರಿಗಾಗಿ ಜಾಗೃತಿ ಕಾರ್ಯಕ್ರಮ

ಸುನಿಲ್ ಪೊನ್ನೇಟಿ

ಮಡಿಕೇರಿ:

ಮಕ್ಕಳ ದಿನಾಚರಣೆ ಅಂಗವಾಗಿ ಹಮ್ಮಿಯಾಲ ಮುಟ್ಲು ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಶನಿವಾರ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿಯ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಾಂಡ ಸವಿತಾ ಕೀರ್ತನ್ ವಿವಿಧ ಯೋಜನೆಗಳ ಮಾಹಿತಿ ನೀಡಿದರು.

ಇಲಾಖೆಯ ಯೋಜನೆಗಳಾದ, ಮಾತ್ರವಂದನ ಭಾಗ್ಯಲಕ್ಷ್ಮಿ, ಗೃಹಲಕ್ಷ್ಮಿ, ಮಡಿಲು ಯೋಜನೆ, ಕಾನೂನು ರೀತಿಯಲ್ಲಿ ದತ್ತು ಪಡೆಯುವ ಬಗ್ಗೆ, ಕ್ಯಾನ್ಸರ್ ಕುರಿತು ಅರಿವು ಮೂಡಿಸಿದರು. ನಂತರ ಅಂಗನವಾಡಿ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು, ಛದ್ಮವೇಷ ಕಾರ್ಯಕ್ರಮ ನೆರವೇರಿತು. ಭಾಗವಹಿಸಿದ ಎಲ್ಲ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ತಾರಾಮಣಿ, ಮೀರಾ, ಸಹಾಯಕಿ ಮಲ್ಲಿಗೆ, ಸವಿತಾ ಹಾಜರಿದ್ದರು