ಜಿಲ್ಲೆ

ಮಹಿಳೆ ಸ್ವಾವಲಂಬಿಯಾಗುತ್ತಿರುವುದು ಶ್ಲಾಘನೀಯ

ರಾಜಣ್ಣ

ಬೇಲೂರು: ಮಹಿಳೆಯರು ಸ್ವಸಹಾಯ ಸಂಘಗಳ ಮೂಲಕ ಆರ್ಥಿಕವಾಗಿ ಸದೃಢರಾಗಿ, ಸ್ವಾವಲಂಬಿ ಜೀವನದ ಮೂಲಕ ಎಲ್ಲ ಕ್ಷೇತ್ರದಲ್ಲೂ ಛಾಪು ಮೂಡಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.


ತಾಲೂಕಿನ ಹೆಬ್ಬಾಳು ಗ್ರಾಮ ಪಂಚಾಯಿತಿ ಆವರಣದಲ್ಲಿ ಶ್ರೀದೇವಿ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಮಹಿಳೆಯರು ತಯಾರಿಸಿದ ಆಹಾರ ಉತ್ಪನ್ನಗಳನ್ನು ಗುರುವಾರ ಮಾರುಕಟ್ಟೆಗೆ ಬಿಡುಗಡೆಗೊಳಿಸಿ ಮಾತನಾಡಿದರು.


ಶ್ರೀದೇವಿ ಸ್ತ್ರೀಶಕ್ತಿ ಸಂಘದ ಮಹಿಳೆಯರು ತಾವು ತಯಾರಿಸಿದ ಆಹಾರ ಪದಾರ್ಥಗಳಿಗೆ ಮಾರುಕಟ್ಟೆ ಕಲ್ಪಿಸಿಕೊಂಡು, ಸ್ವಾವಲಂಬಿ ಬದುಕು ಕಂಡುಕೊಂಡಿರುವುದು ಮಾದರಿಯಾಗಿದೆ ಎಂದರು.


ತಾಪಂ ಇಒ ಸತೀಶ್, ಹೆಬ್ಬಾಳು ಗ್ರಾಪಂ ಅಧ್ಯಕ್ಷೆ ಪ್ರತೀಭಾ ತೀರ್ಥ, ಉಪಾಧ್ಯಕ್ಷೆ ಶೋಭಾ, ಶ್ರೀದೇವಿ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರು ಇದ್ದರು.