ಜಿಲ್ಲೆ

ಮಹಿಳಾ ಸಬಲೀಕರಣಕ್ಕೆ ಆದ್ಯತೆ

ಮಸ್ಕಿ: ಕಾಂಗ್ರೆಸ್ ದೇಶದ ಜನರ ಏಳಿಗೆ ಬಯಸುವ ಪಕ್ಷವಾಗಿದ್ದು, ರಾಜ್ಯದಲ್ಲಿ ಅಭಿವೃದ್ಧಿಗೆ ಮುನ್ನುಡಿ ಬರೆದಿದೆ ಎಂದು ಶಾಸಕ ಆರ್. ಬಸನಗೌಡ ತುರ್ವಿಹಾಳ ಹೇಳಿದರು.

ಭ್ರಮರಾಂಬ ದೇವಸ್ಥಾನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿ ಬುಧವಾರ ಮಾತನಾಡಿದರು. ಬಡ ಜನರ ಸಂಕಷ್ಟಕ್ಕೆ ಕಾಂಗ್ರೆಸ್ ಸರ್ಕಾರ ಸ್ಪಂದಿಸುತ್ತದೆ. ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳ ಜಾರಿಗೆ ಸರ್ಕಾರ ಬದ್ಧವಾಗಿದೆ. ಗೃಹಲಕ್ಷ್ಮಿ ಯೋಜನೆ ಮೂಲಕ ಕುಟುಂಬದ ಯಜಮಾನಿ ಬ್ಯಾಂಕ್ ಖಾತೆಗೆ 2 ಸಾವಿರ ರೂ. ಜಮಾ ಮಾಡುವ ಮೂಲಕ ಅವರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿದೆ. ಕಾಂಗ್ರೆಸ್ ಮಹಿಳಾ ಸಬಲೀಕರಣಕ್ಕಾಗಿ ಹೆಚ್ಚಿನ ಒತ್ತನ್ನು ನೀಡಿದೆ ಎಂದರು.