ಜಿಲ್ಲೆ

ಚಾಮುಂಡಿಬೆಟ್ಟದ ಸ್ವಚ್ಚತಾ ಮಹಿಳಾ ಸಿಬ್ಬಂದಿಗೆ ಬಾಗಿನ

ಮೈಸೂರು: ಶ್ರೀ ದುರ್ಗಾ ಫೌಂಡೇಷನ್ ವತಿಯಿಂದ ಆಷಾಢ ಮಾಸದ ಮಾಸದ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿ ಶ್ರೀಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿಗೆ ಸೀರೆ, ಬಳೆ, ಅರಿಶಿನ ಕುಂಕುಮ ಬಾಗಿನ ಸಮರ್ಪಣೆ ಮಾಡಲಾಯಿತು.

ಈ ಸಂದರ್ಭ ಫೌಂಡೇಷನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್ ಮಾತನಾಡಿ, ಆಷಾಢ ಮಾಸದಲ್ಲಿ ಚಾಮುಂಡಿ ದೇವಿಗೆ ವಿಶೇಷ ಪ್ರಾರ್ಥನೆ ಪೂಜಾ, ಕೈಂಕರ್ಯ ಸೇವೆ ಸಲ್ಲಿಸಲು ಮಹಿಳೆಯರು ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ. ದೇವಸ್ಥಾನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಲು ಆಗಮಿಸಿದರೂ ಸ್ವಚ್ಛತೆಯಲ್ಲಿ ಯಾವುದೇ ರೀತಿಯ ಲೋಪವಾಗದಂತೆ ನೋಡಿಕೊಳ್ಳುವಲ್ಲಿ ಸ್ವಚ್ಛತಾ ಸಿಬ್ಬಂದಿ ಶ್ರಮ ಅಪಾರ. ಈ ಹಿನ್ನೆಲೆಯಲ್ಲಿ ಮಹಿಳಾ ಸ್ವಚ್ಛತಾ ಸಿಬ್ಬಂದಿಗೆ ಬಾಗಿನ ನೀಡಲಾಗುತ್ತಿದೆ ಎಂದರು.

ಚಾಮುಂಡಿ ಬೆಟ್ಟದ ಪರಿಸರ ಸೌಂದರ್ಯ ಕಾಪಾಡಲು ಸರ್ಕಾರ ಏಕಬಳಕೆಯ ಪ್ಲಾಸ್ಟಿಕ್‌ಅನ್ನು ಸಂಪೂರ್ಣ ನಿಷೇಧಿಸಿದೆ. ಹಾಗಾಗಿ ಸಾರ್ವಜನಿಕರು ಪಾಲಿಸಿದರೆ ಚಾಮುಂಡಿಬೆಟ್ಟ ಪ್ಲಾಸ್ಟಿಕ್ ಮುಕ್ತವಲಯವಾಗುತ್ತದೆ ಎಂದರು. ಈ ಸಂದರ್ಭ ಕೆವಿಕೆ ಫೌಂಡೇಷನ್ ಅಧ್ಯಕ್ಷೆ ಖುಷಿ ವಿನು, ಪ್ರಮುಖರಾದ ಸವಿತಾ ಘಾಟ್ಕೆ, ಜಯಶ್ರೀ ಶಿವರಾಮ್, ರೂಪ, ವಿದ್ಯಾ, ಸಮಾಜ ಸೇವಕಿ ಶಾಂತಮ್ಮ ಹಾಗೂ ಇನ್ನಿತರರು ಹಾಜರಿದ್ದರು.