?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????? 
ಜಿಲ್ಲೆ

ಪ್ರತಿ ಕ್ಷೇತ್ರದಲ್ಲೂ ಮಹಿಳೆಯರ ಪಾತ್ರ ಮುಖ್ಯ: ಜಿಲ್ಲಾಧಿಕಾರಿ

ಉಡುಪಿ: ಆಧುನಿಕ ಯುಗದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರ ಪಾತ್ರ ಮುಖ್ಯವಾಗಿದ್ದು, ಸಮಾನತೆ ನೀಡುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದರು.

ಬುಧವಾರ ಕೃಷ್ಣ ಮಠ ಆವರಣದ ರಾಜಾಂಗಣದಲ್ಲಿ ರಾಜ್ಯ ಮಹಿಳಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಹಾಗೂ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ಜಿಲ್ಲಾ ಹಾಗೂ ತಾಲೂಕು ಸ್ತ್ರೀಶಕ್ತಿ ಒಕ್ಕೂಟ ಹಾಗೂ ಪರ್ಯಾಯ ಕೃಷ್ಣಾಪುರ ಮಠ ಸಹಯೋಗದೊಂದಿಗೆ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರು ಪ್ರತಿಯೊಂದು ರಂಗ ಹಾಗೂ ಕ್ಷೇತ್ರದಲ್ಲಿ ತಮ್ಮನ್ನ ತಾವು ತೊಡಗಿಸಿಕೊಂಡು ಸೇವೆಯನ್ನು ನೀಡಬೇಕು. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಕ್ರೀಡೆ, ಸಾಹಿತ್ಯ, ಕಲೆ, ಆಡಳಿತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧೆ ನೀಡುತ್ತಿದ್ದಾರೆ. ಹೀಗೆ ಮಹಿಳೆಯರಿಗೆ ಎಲ್ಲಾ ಪ್ರಕಾರಗಳಲ್ಲೂ ಅವಕಾಶ ಸೀಗಬೇಕು. ಸ್ಪೂರ್ತಿದಾಯಕ ಮಹಿಳೆಯರನ್ನ ಪ್ರೇರಣೆಯಾಗಿ ತೆಗೆದುಕೊಂಡು ಮುಂದಿನ ದಿನಗಳಲ್ಲಿ ಎಲ್ಲಾ ಸೇವೆಗಳಲ್ಲೂ ಸಮಾನ ಅವಕಾಶ ಗಳಿಸಬೇಕು ಎಂದರು.

ಒನ್ ಸ್ಟಾಪ್ ಸೆಂಟರ್ ಮತ್ತು ಸಾಂತ್ವನ ಕೇಂದ್ರಗಳಂತಹ ಸಂಸ್ಥೆಗಳಲ್ಲಿ ಕೆಲಸ ಮಾಡುವವರು ನೊಂದ ಮಹಿಳೆಯರಿಗೆ ಧೈರ್ಯ ತುಂಬುವ ಮೂಲಕ ಅವರ ಸಮಸ್ಯೆಗಳ ಬಗೆಹರಿಸಿ ನೆರವು ನೀಡಬೇಕು. ನೊಂದವರಿಗೆ ಸ್ವಯಂ ಉದ್ಯೋಗ ಹೊಂದಲು ವೃತ್ತಿ ತರಬೇತಿ ಮತ್ತು ಬೇರೆ ಬೇರೆ ಅಂಶಗಳ ಬಗ್ಗೆ ಮಾಹಿತಿ ನೀಡಬೇಕಿಕು. ಪ್ರತಿಯೊಂದು ಹಂತದಲ್ಲೂ ಖಾಸಗಿ ಅಥವಾ ಸರಕಾರಿ ಯಾವುದೇ ಸಂಸ್ಥೆಯಾದರೂ ಅದರಲ್ಲಿ ಮಹಿಳೆಯರಿಗೋಸ್ಕರ ದೂರು ನೀಡುವ ಅಥವಾ ಆಂತರಿಕ ಸಮಿತಿ ರಚಿಸಿ, ಮಹಿಳೆಯರು ಸಮಸ್ಯೆಗೆ ಒಳಗಾದಾಗ ಅವರಿಗೆ ನೆರವು ನೀಡಬೇಕು ಎಂದರು.

ಶಾಸಕ ಕೆ. ರಘುಪತಿ ಭಟ್ ಮಾತನಾಡಿ, ಮಹಿಳೆಯರು ಪುರುಷರಿಗಿಂತ ಕಡಿಮೆ ಏನಿಲ್ಲ ಎಂಬುವಂತೆ ಎಲ್ಲಾ ಹುದ್ದೆಗಳಲ್ಲಿಯೂ ಕಾರ್ಯನಿರ್ವಹಿಸಲು ಮುಂದಾಗಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಮಾತನಾಡಿ, ಮಹಿಳಾ ದಿನಾಚರಣೆಯ ಉದ್ದೇಶ ಮಹಿಳೆಯರನ್ನ ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸಬಲರನ್ನಾಗಿ ಮಾಡುವುದಾಗಿದೆ. ಸಮಾಜದ ಎಲ್ಲಾ ಮಹಿಳೆಯರ ಸಬಲಿಕರಣಕ್ಕೆ ಶಿಕ್ಷಣ ಬಹಳ ಮುಖ್ಯ. ದೇಶದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಮಹಿಳೆಯರು ಧೈರ್ಯದಿಂದ ಮುಂದೆ ಬಂದು ದೌರ್ಜನ್ಯ, ಶೋಷಣೆ ಬಗ್ಗೆ ನೇರವಾಗಿ ಹೇಳಿಕೊಳ್ಳುವ ಮನೋಭಾವನೆ ಬೆಳೆಸಿಕೊಳ್ಳಬೇಕು. ಮಹಿಳೆಯರನ್ನು ನೋಡುವ ದೃಷ್ಠಿಯನ್ನು ಬದಲಾಯಿಸಿಕೊಂಡು ಪುರುಷರು ಕೂಡ ಮಹಿಳೆಯರ ಸಬಲೀಕರಣಕ್ಕೆ ಪ್ರೋತ್ಸಾಹ ನೀಡಬೇಕು ಎಂದರು.

ಇದೇ ಸಂದರ್ಭದಲ್ಲಿ ಕಲೆ, ಕ್ರೀಡೆ, ಸಂಸ್ಕೃತಿ ಸಾಹಿತ್ಯ ಮುಂತಾದ ಕ್ಷೇತ್ರದಲ್ಲಿ ಸಾಧನೆಗೈದ ಮಕ್ಕಳಿಗೆ ಹಾಗೂ ಅನುಭವ ಪರಿಣಿತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು. ಮಹಿಳೆಯರು ಉತ್ಪಾದಿಸಿದ ವಸ್ತುಗಳ ಮಾರಾಟ ಮತ್ತು ಪ್ರದರ್ಶನ ಏರ್ಪಡಿಸಲಾಗಿತ್ತು.

ಮಹಿಳಾ ಮಂಡಳಗಳ ಒಕ್ಕೂಟದ ಜಿಲ್ಲಾಧ್ಯಕ್ಷೆ ಸರಳಾ ಕಾಂಚನ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಬಿ.ಎಚ್. ಕೃಷ್ಣಪ್ಪ, ಕಾರ್ಯದರ್ಶಿ ವಸಂತಿ ರಾವ್, ಕುಂದಾಪುರ ಮಹಿಳಾ ಮಂಡಲದ ಅಧ್ಯಕ್ಷೆ ರಾಧಾ ದಾಸ್, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಕಾರ್ಯದರ್ಶಿ ಪ್ರೇಮಾ ಉಪಸ್ಥಿತರಿದ್ದರು.