ಹುಬ್ಬಳ್ಳಿ: ಇಲ್ಲಿಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಲೋಕಸಭಾ ಚುನಾವಣೆ ವೇಳೆ ಅತ್ಯುತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ಉತ್ತಮ ಚುನಾವಣಾ ಸಾಕ್ಷರತಾ ಕ್ಲಬ್ ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನವಾಗಿದೆ.
ಪಾಲಿಟೆಕ್ನಿಕ್ ಸಿಪಿ ವಿಭಾಗದ ಉಪನ್ಯಾಸಕಿ, ಚುನಾವಣಾ ಸಾಕ್ಷರತಾ ಕ್ಲಬ್ ನೋಡಲ್ ಅಧಿಕಾರಿ ಮೇಧಾ ಜೈವಂತ ಅವರಿಗೆ ಉತ್ತಮ ಚುನಾವಣಾ ಸಾಕ್ಷರತಾ ಕ್ಲಬ್ ನ ಕಾರ್ಯ ಶ್ಲಾಘಿಸಿ ಬೆಂಗಳೂರಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು.
ಪಾಲಿಟೆಕ್ನಿಕ್ ಪ್ರಾಂಶುಪಾಲರು, ಕುಲಸಚಿವರು, ಇತರರು ಇವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.