ಜಾನೇಕಲ್‌ನಲ್ಲಿ ಗುರುವಾರ ಏರ್ಪಡಿಸಿದ್ದ ಗ್ರಾಮ ಲಿಂಗತ್ವ ಆಧಾರಿತ ದೌರ್ಜನ್ಯ ವಿರುದ್ದ ರಾಷ್ಟ್ರೀಯ ಅಭಿಯಾನ ಕಾರ್ಯಕ್ರಮವನ್ನು ಪಿಡಿಒ ಬಸಪ್ಪ ಉದ್ಘಾಟಿಸಿದರು. ವಲಯ ಮೇಲ್ವಿಚಾರಕ ಸೂರತ್ ಪ್ರಸಾದ್ ಗಟ್ಟು, ಒಕ್ಕೂಟದ ಅಧ್ಯಕ್ಷೆ ಅಮರಮ್ಮ, ಕಾರ್ಯದರ್ಶಿ ಜೈತುನಾ, ಪೊಲೀಸ್ ಸಿಬ್ಬಂದಿ ರವಿ.ಪಿ, ಶರಣಬಸವ, ಪ್ರಮುಖರಾದ ಶ್ರೀದೇವಿ, ಸಂಗೀತಾ ಇದ್ದರು.  
ಜಿಲ್ಲೆ

ಸಬಲರಾದಾಗ ದೌರ್ಜನ್ಯ ತಡೆಯಲು ಸಾಧ್ಯ

ಪ್ರವೀಣ ಉದುಸಾ ದಲಬಂಜನ್

ಮಾನ್ವಿ: ಮಹಿಳಾ ಹಕ್ಕುಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಸಮಸ್ಯೆಗಳನ್ನು ಪರಿಹರಿಸಲು ವಿವಿಧ ಲಿಂಗತ್ವ ವೇದಿಕೆಗಳನ್ನು ರಚಿಸಲಾಗುವುದು ಎಂದು ಕೌಶಲ್ಯ ಅಭಿವೃದ್ದಿ, ವಲಯ ಮೇಲ್ವಿಚಾರಕ ಸೂರತ್ ಪ್ರಸಾದ್ ಗಟ್ಟು ಹೇಳಿದರು.

ಲಿಂಗತ್ವ ಆಧಾರಿತ ದೌರ್ಜನ್ಯ ವಿರುದ್ಧ ರಾಷ್ಟ್ರೀಯ ಅಭಿಯಾನ ಕಾರ್ಯಕ್ರಮ

ತಾಲೂಕಿನ ಜಾನೇಕಲ್ ಗ್ರಾಮದಲ್ಲಿ ಕೌಶಲ್ಯ ಅಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಸಂಜೀವಿನಿ ತಾಲೂಕು ಅಭಿಯಾನ ನಿರ್ವಹಣಾ ಘಟಕ, ಸಿರಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಹಾಗೂ ಉಪ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಮಹಿಳಾ ಒಕ್ಕೂಟ ಜಾನೇಕಲ್ ಜಂಟಿಯಾಗಿ ಗುರುವಾರ ಹಮ್ಮಿಕೊಂಡಿದ್ದ ಲಿಂಗತ್ವ ಆಧಾರಿತ ದೌರ್ಜನ್ಯ ವಿರುದ್ಧ ರಾಷ್ಟ್ರೀಯ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸ್ವ-ಸಹಾಯ ಲಿಂಗತ್ವ ಪ್ರಮುಖ ವ್ಯಕ್ತಿಗಳ ಆಯ್ಕೆ ಮಾಡಲಾಗುವುದು. ಮಹಿಳೆಯರು ಸಂಘಟಿತರಾಗಿ ಆರ್ಥಿಕ, ಶೈಕ್ಷಣಿಕವಾಗಿ ಸಬಲರಾದಾಗ ಮಾತ್ರ ದೌರ್ಜನ್ಯ ತಡೆಯಲು ಸಾಧ್ಯವಾಗುತ್ತದೆ ಎಂದರು. ಜಾನೇಕಲ್ ಪಿಡಿಒ ಬಸಪ್ಪ ಕಾರ್ಯಕ್ರಮ ಉದ್ಘಾಟಿಸಿದರು.