ವಾಲಿಬಾಲ್ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿಧ್ಯಾರ್ಥಿಗಳು. ವಿಜಯಕುಮಾರ್, ಬಸವರಾಜ್ ಶೆಟ್ಟಿ, ಬಸವರಾಜ್, ಬೋಜೆಗೌಡ, ಪ್ರೇಮಾ ಇತರರು ಇದ್ದರು.  
ಜಿಲ್ಲೆ

ವಾಲಿಬಾಲ್ ಪಂದ್ಯದಲ್ಲಿ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಶಾಲನಗರ: ಶನಿವಾರಸಂತೆಯಲ್ಲಿ ಬುಧವಾರ ಆಯೋಜಿಸಿದ್ದ ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕು ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾವಳಿಯಲ್ಲಿ ತಾಲೂಕಿನ ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿನ 21 ಕಾಲೇಜುಗಳ ವಾಲಿಬಾಲ್ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದವು. ಅಂತಿಮ ಪಂದ್ಯಾಟದಲ್ಲಿ ಹೆಬ್ಬಾಲೆಯ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಕುಶಾಲನಗರದ ಕನ್ನಡ ಭಾರತೀ ಪದವಿ ಪೂರ್ವ ಕಾಲೇಜು ತಂಡಗಳ ನಡುವಿನ ಸ್ಪರ್ಧೆಯಲ್ಲಿ ಸಂಯುಕ್ತ ಪದವಿ ಪೂರ್ವ ಕಾಲೇಜು ತಂಡ ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಕಾಲೇಜಿನ ಎಲ್ಲ ಕ್ರೀಡಾಪಟುಗಳು ಹಾಗೂ ತಂಡದ ವ್ಯವಸ್ಥಾಪಕರನ್ನು ಪ್ರಾಂಶುಪಾಲ ಎಂ.ಕೆ.ವಿಜಯಕುಮಾರ್ ಹಾಗೂ ಸಂಸ್ಥೆಯ ಆಡಳಿತ ಮಂಡಳಿ ಅಭಿನಂದಿಸಿದೆ.