ಹಳಿಯಾಳ: ವಿಕಸಿತ ಭಾರತಕ್ಕಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ಸೂಚಕವಾಗಿ ಐತಿಹಾಸಿಕ ಸದಸ್ಯತ್ವ ಅಭಿಯಾನವನ್ನು ಕಾರ್ಯಕರ್ತರು ಪ್ರತಿ ಬೂತ್ ಮಟ್ಟದಿಂದಲೂ ದಾಖಲೆ ಪ್ರಮಾಣದಲ್ಲಿ ಸದಸ್ಯತ್ವ ನೋಂದಣಿ ಮಾಡಿಸುವ ನಿಟ್ಟಿನಲ್ಲಿ ಸಮರ್ಪಣಾ ಭಾವದಿಂದ ಶ್ರಮಿಸಬೇಕು ಎಂದು ಉಕ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಹೇಳಿದರು.
ತಾಲೂಕಿನ ಭಾಗವತಿ ಹಾಗೂ ಗೌಳಿವಾಡಾ ಭಾಗದಲ್ಲಿ ಶುಕ್ರವಾರ ಸದಸ್ಯತ್ವ ಅಭಿಯಾನದ ಭಾಗವಾಗಿ ಪ್ರವಾಸ ಕೈಗೊಂಡು, ಅಲ್ಲಿನ ಮನೆಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸದಸ್ಯತ್ವ ನೋಂದಣಿ ಪ್ರಕ್ರಿಯೆ ನಡೆಸಿ ಗಮನ ಸೆಳೆದರು.
ಈ ವೇಳೆ ಮಾತನಾಡಿದ ಅವರು, ಕಳೆದ ಒಂದೂವರೆ ತಿಂಗಳಿನಿಂದ ಹಳಿಯಾಳ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಸುನೀಲ ಹೆಗಡೆ ಅವರ ಮಾರ್ಗದರ್ಶನದಂತೆ ವಿವಿಧ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಶ್ರಮಪಟ್ಟು ದಾಖಲೆ ಪ್ರಮಾಣದಲ್ಲಿ ಸದಸ್ಯತ್ವ ನೋಂದಣಿ ನಡೆಸುತ್ತಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
ತಾಲೂಕಾಧ್ಯಕ್ಷ ವಿಠ್ಠಲ ಸಿದ್ದನ್ನವರ, ಮಂಡಲ ಪ್ರಭಾರಿ ನಿತ್ಯಾನಂದ ಗಾಂವ್ಕರ, ಸುಧಾಕರ ರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ ಘಟಕಾಂಬಳೆ, ವಿ.ಎಂ. ಪಾಟೀಲ, ಪ್ರಮುಖರಾದ ತಾನಾಜಿ ಪಟ್ಟೇಕರ, ಚಂದ್ರಕಾಂತ ಕಮ್ಮಾರ, ಗೋಕುಲ ಚೌಗುಲೆ, ಜ್ಯೋತಿಬಾ, ಡೋಂಗ್ರು ಕೇಸರೇಕರ, ಪಾಂಡು ಪಾಟೀಲ, ಸಂಜಯ ಹಿರೇಕರ, ಇತರರಿದ್ದರು.