ವಿಜಯಪುರದ ಜಿ.ಪಂ. ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್​ ಕುಮಾರ ೂಷ್​ ಮಾತನಾಡಿದರು. ಎಡಿಸಿ ಸೋಮಲಿಂಗ ಗೆಣ್ಣೂರ, ಜಿ.ಪಂ. ಸಿಇಒ ರಿಷಿ ಆನಂದ ಇದ್ದಾರೆ. 
ಜಿಲ್ಲೆ

ಎಸ್​ಎಸ್​ಎಲ್​ಸಿ, ಪಿಯು ಪರೀಕ್ಷೆ ಫಲಿತಾಂಶ ಸುಧಾರಣೆಗೆ ಶ್ರಮಿಸಿ

ಗಿರೀಶ ಸಗರ

ವಿಜಯಪುರ: ಎಸ್​ಎಸ್​ಎಲ್​ಸಿ ಹಾಗೂ ದ್ವೀತಿಯ ಪಿಯುಸಿ ಪರೀೆ ಫಲಿತಾಂಶ ಸುಧಾರಣೆಗೆ ಸಂಬಂಧಿಸಿದ ಅಧಿಕಾರಿಗಳು ಈಗಿನಿಂದಲೇ ಯೋಜನಾಬದ್ಧವಾಗಿ ಕಾರ್ಯ ನಿರ್ವಹಿಸಲು ಅಗತ್ಯ ಕ್ರಮ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್​ ಕುಮಾರ ೂಷ್​ ಹೇಳಿದರು.

ನಗರದ ಜಿ.ಪಂ. ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅವರ ಶೈಕ್ಷಣಿಕ ಗುಣಮಟ್ಟ ಸುಧಾರಿಸಿ, ಉತ್ತಮ ಫಲಿತಾಂಶಕ್ಕಾಗಿ ಸೂಕ್ಷ$್ಮ ಯೋಜನೆಗಳನ್ನು ರೂಪಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅನುದಾನಿತ ಶಾಲೆಗಳಲ್ಲಿ ಅಗತ್ಯಕ್ಕೆ ಅನುಸಾರವಾಗಿ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮಗಳನ್ನು ಕೈಗೊಳ್ಳವಂತೆ ಸಂಸ್ಥೆಗಳಿಗೆ ಸೂಚಿಸಬೇಕು ಹಾಗೂ ಫಲಿತಾಂಶ ಹೆಚ್ಚಿಸಲು ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದರು.

ಪ್ರಾಥಮಿಕ ಶಾಲಾ ಹಂತದಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರಿಗೆ ಪ್ರೋತ್ಸಾಹಿಸಿ ಪ್ರಾಥಮಿಕ ಹಂತದಲ್ಲೇ ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸಿದಲ್ಲಿ ಪ್ರೌಢಶಾಲೆ ಹಾಗೂ ಪದವಿ ಪೂರ್ವಗಳ ಪರೀೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದರು.

ಜಿಲ್ಲೆಯ ವಿವಿಧ ತಾಲೂಕಿನಲ್ಲಿ ನಿರ್ಮಿಸುತ್ತಿರುವ ಪ್ರಜಾಸೌಧಗಳನ್ನು ಶ್ರೀ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ, ಜಿಲ್ಲೆಯ ವಿವಿಧ ಕಚೇರಿಗಳಲ್ಲಿ ಕೆಸ್ವಾನ್​ ಸಂಪರ್ಕ ಹೊಂದಿದ್ದಲ್ಲಿ ಇ&ಆಫೀಸ್​ ಅನುಷ್ಠಾನಗೊಳಿಸುವಂತೆ ತಿಳಿಸಿದರು.ಜಿ.ಪಂ. ಸಿಇಒ ರಿಷಿ ಆನಂದ

ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಉತ್ತಮ ಫಲಿತಾಂಶಕ್ಕಾಗಿ ರೂಪಿಸಿರುವ ಯೋಜನೆಗಳ ಕುರಿತು ಹಾಗೂ ಪ್ರತಿ ವಾರ ಶಿಕ್ಷಣದ ಅಭಿವೃದ್ಧಿ ಬಗ್ಗೆ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿ.ಪಂ. ಉಪ ಕಾರ್ಯದರ್ಶಿ ವಿಜಯಕುಮಾರ್​ ಆಜೂರ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಶಸ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಡಿಎಚ್​ಒ ಡಾ. ಸಂಪತ್​ ಗುಣಾರಿ, ಪ.ಪೂ. ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಕೆ. ಹೊಸಮನಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಟಿ.ಎಸ್​. ಕೋಲಾರ ಮತ್ತಿತರರಿದ್ದರು.